ನಾಪೋಕ್ಲು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ವತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಕೋಕೇರಿ ಪಂಚಾಯಿತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯ ಅಶ್ರಫ್ ಶನಿವಾರ ಕೋಕೇರಿ ಪಟ್ಟಣದ ಮಸೀದಿ, ದೇವಾಲಯಗಳಿಗೆ ಸ್ಯಾನಿಟೈಸ್ ಮಾಡಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದರು.

ಸರ್ಕಾರದ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ಸೋಂಕು ವ್ಯಾಪಿಸದಂತೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅನಗತ್ಯ ಸಂಚಾರ ಮಾಡುವುದು, ಜನದಟ್ಟಣ ಆಗುವುದನ್ನು ತಪ್ಪಿಸಬೇಕು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋದಕ್ಕಿ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.