ಮಂಗಳವಾರ, ಆಗಸ್ಟ್ 3, 2021
23 °C

ಕೊಡಗು | ಕೋವಿಡ್‌ನಿಂದ ವೃದ್ಧೆ ಸಾವು, ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ ದೃಢಪಟ್ಟಿದ್ದ 86 ವರ್ಷದ ವೃದ್ಧೆಯೊಬ್ಬರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತರಾದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ವೃದ್ಧೆ ವಿರಾಜಪೇಟೆ ತಾಲ್ಲೂಕಿನ ಗ್ರಾಮವೊಂದವರ ನಿವಾಸಿ. 

ಅಧಿಕ ರಕ್ತದ ಒತ್ತಡ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೋವಿಡ್ ತಗುಲಿರುವುದು ಜುಲೈ 6ರಂದು ಬಂದ ವೈದ್ಯಕೀಯ ವರದಿಯಿಂದ ದೃಢಪಟ್ಟಿತ್ತು. ಕೋವಿಡ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದರು.‌

ಸರ್ಕಾರ ಮಾರ್ಗಸೂಚಿಯಂತೆ ಭಾನುವಾರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಭಾನುವಾರವೂ ಐದು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು