ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಲಸಿಕೆ ಬಂದ ಮೇಲೆ ಶಾಲೆ

ಜಿ.ಪಂ ಅಧ್ಯಕ್ಷ ಬಿ.ಎ. ಹರೀಶ್‌ ನೇತೃತ್ವದಲ್ಲಿ ಸಾಮಾನ್ಯ ಸಭೆ l ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಿರ್ಧಾರ
Last Updated 11 ನವೆಂಬರ್ 2020, 7:28 IST
ಅಕ್ಷರ ಗಾತ್ರ

ಮಡಿಕೇರಿ: ಕೋವಿಡ್-19ಕ್ಕೆ ಲಸಿಕೆ ಕಂಡು ಹಿಡಿಯುವವರೆಗೆ ಶಾಲೆಗಳನ್ನು ಆರಂಭಿಸದಿರಲು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದ ಜಿ.ಪಂ ಸಭಾಂಗಣದಲ್ಲಿ ಅಧ್ಯಕ್ಷರಾದ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ, ಲಸಿಕೆ ಲಭಿಸುವವರೆಗೆ ಶಾಲೆಗಳನ್ನು ಆರಂಭಿಸಬಾರದು ಎಂಬ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲು ಸದಸ್ಯರು ಒಮ್ಮತ ವ್ಯಕ್ತಪಡಿಸಿದರು.

ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಸಹ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಬಗ್ಗೆ ಮಾಹಿತಿಯಿದ್ದು, ಈ ಸಂಬಂಧ ಕಡಿವಾಣ ಹಾಕಬೇಕಿದೆ ಎಂದು ಸದಸ್ಯ ಸಿ.ಕೆ.ಬೋಪಣ್ಣ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.

ಖಾಸಗಿ ಶಾಲೆಗಳಲ್ಲಿ ಪ್ರಥಮ ಹಂತದ ಶುಲ್ಕ ಪಡೆಯಲಾಗಿದ್ದರೂ ದ್ವಿತೀಯ ಹಂತದ ಶುಲ್ಕ ಪಾವತಿಸುವಂತೆ ಪೋಷಕರಲ್ಲಿ ಒತ್ತಾಯ ಮಾಡುತ್ತಿರುವುದು ಸರಿಯಲ್ಲ ಎಂದು ಸಿ.ಕೆ.ಬೋಪಣ್ಣ ಅವರು ಹೇಳಿದರು. ಈ ಕುರಿತು ಮಾತನಾಡಿದ ಜಿ.ಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್.ಮಂಜುಳಾ ಮತ್ತು ಸದಸ್ಯರಾದ ಸುನಿತಾ, ‘ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳು ಸಹ ಶುಲ್ಕ ವಸೂಲಿ ಮಾಡುತ್ತಿವೆ. ಇದನ್ನು ತಡೆಯಬೇಕು’ ಎಂದು ಒತ್ತಾಯಿಸಿದರು.

ಸದಸ್ಯರಾದ ವಿಜು ಸುಬ್ರಮಣಿ ಮತ್ತು ಬಾನಂಡ ಪ್ರಥ್ಯು ಅವರು, ಹೆಚ್ಚಿನ ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ತಾತ್ಕಾಲಿಕವಾಗಿ ಮಾನ್ಯತೆ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಸದಸ್ಯರಾದ ಶಿವು ಮಾದಪ್ಪ ಅವರು ಮಾತನಾಡಿ, ಖಾಸಗಿ ಶಾಲೆಗಳು ಆನ್‍ಲೈನ್ ಮೂಲಕ ತರಗತಿ ನಡೆಸುತ್ತಿವೆ. ಶಿಕ್ಷಕರಿಗೆ ವೇತನ ಪಾವತಿಸಬೇಕಿದೆ. ಆದ್ದರಿಂದ, ಖಾಸಗಿ ಶಾಲೆ ನಿರ್ವಹಣೆಗೆ ಸಾಧ್ಯವಾದಷ್ಟು ಶುಲ್ಕ ಪಾವತಿಸಬೇಕಿದೆ. ಸದ್ಯ ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ಅವರು ಧ್ವನಿಗೂಡಿಸಿದರು.ಸ್ತಾಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT