ಶುಕ್ರವಾರ, ಸೆಪ್ಟೆಂಬರ್ 30, 2022
25 °C

ಸಿದ್ದಾಪುರ: ಹುಲಿ ದಾಳಿಗೆ ಮತ್ತೊಂದು ಹಸು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಮಂಗಳವಾರ ಮೃತಪಟ್ಟಿದೆ.

ಬಾಡಗಬಾಣಂಗಾಲ ಗ್ರಾಮದ ಘಟ್ಟದಳದ ನಿವಾಸಿ ಜಯಚಂದ್ರ ಅವರು ಹಸುವನ್ನು ಕಳೆದೆರಡು ದಿನಗಳ ಹಿಂದೆ ಮೇಯಲು ಬಿಟ್ಟಿದ್ದರು. ಆದರೆ, ಹಸು ಮನೆಗೆ ಹಿಂತಿರುಗಿ ಬಂದಿರಲಿಲ್ಲ. ಮಂಗಳವಾರ ಹಸುವನ್ನು ಹುಡುಕಿಕೊಂಡು ಹೋಗುವ ಸಂದರ್ಭದಲ್ಲಿ ಘಟ್ಟದಳದ ನಿವಾಸಿ ಕೆ.ಜಿ.ವಿವೇಕ್ ಅವರ ಕಾಫಿ ತೋಟದಲ್ಲಿ ಹಸು ಸತ್ತು ಬಿದ್ದಿರುವುದು ಕಂಡು ಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಲಿ ಹಸುವನ್ನು ಕೊಂದು ಹಾಕಿದ್ದು, ಮತ್ತೆ ಹಸುವಿನ ಕಳೇಬರ ತಿನ್ನಲು ಬರಬಹುದು ಎಂಬ ಶಂಕೆಯಿಂದ ಅರಣ್ಯ ಇಲಾಖಾಧಿಕಾರಿಗಳು ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ತೋಟದ ವಿವಿಧ ಭಾಗದಲ್ಲಿ ಸುಮಾರು 6 ಕ್ಯಾಮೆರಾ ಅಳವಡಿಸಿದ್ದು, ಕಾರ್ಯಾಚರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿದಿನ ಹಾಲು ಮಾರಾಟ ಮಾಡಿ ಬದುಕುತ್ತಿದ್ದ ಜಯಚಂದ್ರ ಅವರು ಹಸುವನ್ನು ಕಳೆದುಕೊಂಡು ನಷ್ಟಕ್ಕೆ ಒಳಗಾಗಿದ್ದಾರೆ. ಈ ಭಾಗದಲ್ಲಿ ಕೆಲ ದಿನಗಳ ಹಿಂದೆಯೂ ಹುಲಿ ದಾಳಿಗೆ ಹಸು ಮೃತಪಟ್ಟಿತ್ತು. ಹುಲಿ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು