ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ: ದುರ್ಗಾ ಪ್ರಸಾದ್

Published 26 ಫೆಬ್ರುವರಿ 2024, 4:13 IST
Last Updated 26 ಫೆಬ್ರುವರಿ 2024, 4:13 IST
ಅಕ್ಷರ ಗಾತ್ರ

ಸಿದ್ದಾಪುರ: ‘ಜಿಲ್ಲೆಯ ಪೊನ್ನಂಪೇಟೆ ಅರಣ್ಯ ಕಾಲೇಜಿನ ಎದುರು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಸಿ.ಪಿ.ಐ(ಎಂ) ಪಕ್ಷ ಬೆಂಬಲ ಸೂಚಿಸಿದೆ’ ಎಂದು ಪಕ್ಷದ ಮುಖಂಡ ದುರ್ಗಾ ಪ್ರಸಾದ್ ತಿಳಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ 18 ದಿನಗಳಿಂದ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಎದುರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ, ಜನಪ್ರತಿನಿಧಿಗಳು ಈ ಬಗ್ಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆರೋಪಿಸಿದರು.

‘ವಿದ್ಯಾರ್ಥಿಗಳು ತಮ್ಮ ನ್ಯಾಯವಾದ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ವಿರಾಜಪೇಟೆ ಕ್ಷೇತ್ರದ ಶಾಸಕರು ಸ್ಪಂದಿಸಿ ಬೇಡಿಕೆ ಈಡೇರಿಸಲು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.

‘ಈ ಹಿಂದೆ ಅರಣ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಶೇ75 ರಷ್ಟು ಮಂದಿಗೆ ಸರ್ಕಾರಿ ಹುದ್ದೆ ನೀಡಲಾಗುತ್ತಿದ್ದು, ಇದೀಗ ಇದನ್ನು ಬದಲಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ’ ಎಂದರು.

ಪಕ್ಷದ ಮುಖಂಡ ಎಚ್.ಬಿ.ರಮೇಶ್ ಮಾತನಾಡಿ, ‘ರಾಜ್ಯದಲ್ಲಿ ಇರುವ ಮೂರು ಅರಣ್ಯ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇವರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ತಮ್ಮ ಪಕ್ಷ ಬೆಂಬಲ ವ್ಯಕ್ತಪಡಿಸಿದೆ’ ಎಂದರು.

ಪಕ್ಷದ ಪ್ರಮುಖರಾದ ಎನ್.ಡಿ.ಕುಟ್ಟಪ್ಪ, ಎ.ಸಿ.ಸಾಬು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT