ಮಡಿಕೇರಿ: ಎಚ್ಐವಿ ಸೋಂಕು ಹರಡುವುದನ್ನು ನಿಯಂತ್ರಿಸಬೇಕಾದರೆ ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿಪೂರ್ವ ಕಾಲೇಜು, ಎಫ್ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ‘ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ, ನನ್ನ ಆರೋಗ್ಯ ನನ್ನ ಹಕ್ಕು’ ಎಂಬ ಘೋಷವಾಕ್ಯದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಚ್ಐವಿ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಹಾಗೂ ಜಾಗೃತಿ ಮೂಡಿಸುವುದಕ್ಕಾಗಿ ಹಾಗೂ ಇದನ್ನು ಎದುರಿಸಲು ಮುಂದಿರುವ ಸವಾಲುಗಳ ಬಗ್ಗೆ ಚಿಂತಿಸುವ ದಿನ ಇದಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ‘ಎಚ್ಐವಿ ಏಡ್ಸ್ ನಿಯಂತ್ರಣ ಕುರಿತು ಸರ್ಕಾರದ ಜತೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈಗೊಂಡ ಕ್ರಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ವಿಶ್ವ ಏಡ್ಸ್ ದಿನ ಪ್ರಯುಕ್ತ ನಡೆದ ಜಾಥಾವನ್ನು ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಪ್ರಶಾಂತಿ.ಜಿ ಅವರು ಉದ್ಘಾಟಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್.ಎನ್ ಭಾಗವಹಿಸಿದ್ದರು.

ಜಾಥಾದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್.ಎಮ್.ಕೆ.ಎಮ್.ಸಿ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳು, ಬಿ.ಎಸ್ಸಿ. ನರ್ಸಿಂಗ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಡಗು, ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಂದಿರುವ ಸವಾಲುಗಳ ಬಗ್ಗೆ ಚಿಂತಿಸುವ ದಿನ ಸರ್ಕಾರದ ಜತೆ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಜಾಗೃತಿ ಜಾಥಾದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.