ಮಂಗಳವಾರ, ನವೆಂಬರ್ 30, 2021
22 °C

ಭಾರತ ಕ್ರಿಕೆಟ್ ತಂಡಕ್ಕೆ ಸೋಲು: ಕ್ರಿಕೆಟ್ ಅಭಿಮಾನಿ ಹೃದಯಾಘಾತದಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ (ಕೊಡಗು ಜಿಲ್ಲೆ): ಐಸಿಸಿ ಟ್ವೆಂಟಿ–20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಪ್ರಥಮ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡಕ್ಕೆ ಸೋಲಾದ ಬಳಿಕ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಭಾನುವಾರ ರಾತ್ರಿ‌ ನಿಧನರಾಗಿದ್ದಾರೆ.

ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು.

ಪಂದ್ಯ ಆರಂಭವಾದ ಕ್ಷಣದಿಂದ ಮುಗಿಯುವ ತನಕ ಟಿ.ವಿಯಲ್ಲಿ ಆಸಕ್ತಿಯಿಂದ ವೀಕ್ಷಿಸುತ್ತಿದ್ದರು. ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದ ಹತ್ತು ನಿಮಿಷದಲ್ಲಿಯೇ ಅವರಿಗೆ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕುಟುಂಬದವರು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಮೃತಪಟ್ಟಿದ್ದರು. ಇವರು ಕಾಫಿ ಬೆಳೆಗಾರರಾಗಿದ್ದರು.

ಇನ್ನಷ್ಟು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು