ಹಿಂದೂ ಸಂಘಟನೆಗಳಿಂದ ಜಾಗೃತಿ ಜಾಥಾ ಸಾಧ್ಯತೆ: ಕೊಡಗಿನಲ್ಲಿ ನಾಳೆ ನಿಷೇಧಾಜ್ಞೆ

ಮಡಿಕೇರಿ: ನಗರದಲ್ಲಿ 2015ರ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಅವರ ಸ್ಮರಣಾರ್ಥವಾಗಿ ವಿಶ್ವ ಹಿಂದೂ ಪರಿಷತ್ ಸೇರಿ ವಿವಿಧ ಸಂಘಟನೆಗಳು ಜಾಗೃತಿ ಜಾಥಾ ನಡೆಸುವ ಸಾಧ್ಯತೆಯಿದ್ದು, ಭದ್ರತೆ ಕೈಗೊಳ್ಳಲಾಗಿದೆ. ಈ ನಡುವೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.
ಜಿಲ್ಲಾ ಪೊಲೀಸ್ ಹಾಗೂ ಅರೆಸೇನಾ ಪಡೆಯ ಸಿಬ್ಬಂದಿ ಮಂಗಳವಾರ ಸಂಜೆ ನಗರದಾದ್ಯಂತ ಪಥಸಂಚಲನ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಭದ್ರತೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನ.10ರ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹ ಪ್ರವೇಶ ಹೊರತುಪಡಿಸಿ ಉಳಿದಂತೆ ಸಭೆ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ. ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಜಾಥಾ, ಮುತ್ತಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.