ಮಡಿಕೇರಿ: ‘ಗೃಹಸಚಿವ ಜಿ.ಪರಮೇಶ್ವರ ಅವರು ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸಲು ದಲಿತ ಶಾಸಕರು, ಸಚಿವರ ಸಭೆ ನಡೆಸುವುದು ತಪ್ಪಲ್ಲ. ಸಭೆ ಕುರಿತು ಯಾರೂ ತಪ್ಪಾಗಿ ಅರ್ಥೈಸಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಪಾದಿಸಿದರು.

‘ಕಾಂಗ್ರೆಸ್ನಲ್ಲಿ ಎಲ್ಲರೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಯಾವುದೇ ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸುವುದರಲ್ಲಿ ತಪ್ಪೇನಿಲ್ಲ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಚುನಾವಣಾ ಆಯೋಗವು ಬಿಜೆಪಿ ಸೇರಿಲ್ಲ ಅಷ್ಟೇ. ಆದರೆ, ಬಾಹ್ಯ ಬೆಂಬಲ ನೀಡುವುದಾಗಿ ಹೇಳುತ್ತಿರುವಂತೆ ಕಾಣುತ್ತಿದೆ. ಏಕೆಂದರೆ, ಕರ್ನಾಟಕದ ಜೊತೆಗೆ, ಮಹಾರಾಷ್ಟ್ರ, ಹರಿಯಾಣ, ಸೇರಿ ದೇಶದ ಬಹುತೇಕ ಕಡೆ ಮತದಾರರ ಪಟ್ಟಿಯಲ್ಲಿ ದೋಷ ಉಂಟಾಗಿದೆ. ವಲಸಿಗರನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಇದರ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟಿಸಲಿದ್ದಾರೆ’ ಎಂದರು.

‘ಧರ್ಮಸ್ಥಳಕ್ಕೆ ಕೆಟ್ಟ ಹೆಸರು, ಒಳ್ಳೆಯ ಹೆಸರು ತರುವಂಥದ್ದೇನಿಲ್ಲ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದು ತಪ್ಪಾಗುತ್ತದೆ. ತನಿಖೆ ನಂತರ ಸತ್ಯ ತಿಳಿಯಲಿದೆ. ಅಲ್ಲಿಯವರೆಗೂ ಕಾಯಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.