ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತೆ ಕೊಂದ ಆರೋಪಿ ಸೊಸೆ ಬಂಧನ

ಅತ್ತೆಯನ್ನು ಕೊಂದು ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆ!
Published 3 ಮೇ 2024, 19:49 IST
Last Updated 3 ಮೇ 2024, 19:49 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ಮರಗೋಡಿನ ನಿವಾಸಿ ಐಮಂಡ ಪೂವಮ್ಮ (73) ಅವರನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಅವರ ಸೊಸೆ ಬಿಂದು (23) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

‘ಶಿಕ್ಷಕರಾಗಿರುವ ಪತಿ ಪ್ರಸನ್ನ ಏಪ್ರಿಲ್ 15ರಂದು ಮೌಲ್ಯಮಾಪನ ಕರ್ತವ್ಯಕ್ಕೆಂದು ಮಡಿಕೇರಿಗೆ ತೆರಳಿದ್ದರು. ಆ ವೇಳೆ ಉಪಾಹಾರ ಮಾಡುವ ಕುರಿತು ಅತ್ತೆ, ಸೊಸೆ ನಡುವೆ ಜಗಳ ನಡೆದಿತ್ತು. ಕೋಪಗೊಂಡ ಆರೋಪಿಯು ಮೊಬೈಲ್‌ನಿಂದ ಪೂವಮ್ಮ ಅವರ ತಲೆಯ ಹಿಂಭಾಗಕ್ಕೆ ಹೊಡೆದು ಕೋಣೆಯಿಂದ ಹೊರ ಬಂದಿದ್ದರು. ತೀವ್ರ ರಕ್ತಸ್ರಾವದಿಂದ ಐಮಂಡ ಪೂವಯ್ಯ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಳಿಕ ಆರೋಪಿಯು, ಕುಸಿದು ಬಿದ್ದು ಅತ್ತೆ ಮೃತಪಟ್ಟಿದ್ದಾರೆಂದು ಬಿಂಬಿಸಿ ಅಂತ್ಯಕ್ರಿಯೆ ನಡೆಸಿದ್ದರು. ಪತ್ನಿಯ ವರ್ತನೆಯಲ್ಲಿ ಬದಲಾವಣೆಗಳನ್ನು ಗಮನಿಸಿದ ಪತಿ ಪ್ರಸನ್ನ ಏಪ್ರಿಲ್ 28ರಂದು ದೂರು ನೀಡಿದ್ದರು. ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬಿ.ಕಾಂ ಪದವೀಧರೆಯಾಗಿದ್ದು, ಒಂದೂವರೆ ವರ್ಷದ ಮಗು ಇದೆ’ ಎಂದು ಪೊಲೀಸರು ಹೇಳಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT