ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11ರಿಂದ ಮೂರು ದಿನ ಪ್ರವಾಸಿ ಉತ್ಸವ

ಸಿದ್ಧತೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕೆ. ಲಕ್ಷ್ಮಿಪ್ರಿಯಾ ಸೂಚನೆ
Last Updated 2 ಜನವರಿ 2019, 13:02 IST
ಅಕ್ಷರ ಗಾತ್ರ

ಮಡಿಕೇರಿ: ‘ಜಿಲ್ಲಾ ಪ್ರವಾಸಿ ಉತ್ಸವ’ವು ಜ. 11ರಿಂದ 13ರ ತನಕ ನಡೆಯಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಚಾರ ನಡೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ವ್ಯಾಪಕ ಪ್ರಚಾರ ನೀಡಿದರೆ ಮಾತ್ರ ಉತ್ಸವ ಯಶಸ್ವಿ ಆಗಲಿದೆ. ಜನರ ಪಾಲ್ಗೊಳ್ಳುವಿಕೆ ಮುಖ್ಯ’ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಎಚ್.ಪಿ. ಜನಾರ್ದನಮಾತನಾಡಿ, ಪ್ರವಾಸಿ ಉತ್ಸವದಲ್ಲಿ ಪ್ರತಿದಿನ ಸಂಜೆ 6ರಿಂದ ರಾತ್ರಿ 10ರ ವರೆಗೆ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಲವು ಬಗೆಯ ಆಹಾರ, ತಿಂಡಿ ತಿನಿಸು ಮಳಿಗೆಗಳು, ವಿವಿಧ ಕರಕುಶಲ ಹಾಗೂ ಇತರೆ ವಸ್ತುಗಳ ಮಾರಾಟ ಮಳಿಗೆ ಪ್ರವಾಸಿಗರನ್ನು ಆಕರ್ಷಿಸಲಿವೆ ಎಂದು ತಿಳಿಸಿದರು.

ಜ. 12ರಂದು ಪಶು ಸಂಗೋಪನೆ ಇಲಾಖೆ ವತಿಯಿಂದ ಶ್ವಾನ ಪ್ರದರ್ಶನ ನಡೆಯಲಿದೆ. 11ರಿಂದ ಮೂರು ದಿನಗಳ ಕಾಲ ತೋಟಗಾರಿಕೆ ಇಲಾಖೆ ವತಿಯಿಂದ ರಾಜಾಸೀಟ್‌ನಲ್ಲಿಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

13ರಂದು ಬೆಳಿಗ್ಗೆ 8ರಿಂದ ‘ಓಪನ್ ಸ್ಟ್ರೀಟ್ ಪೆಸ್ಟಿವಲ್’ ನಡೆಯಲಿದ್ದು, ಅಂದೇ ದಿನ ಬೆಳಿಗ್ಗೆ 8ಕ್ಕೆ ಯೋಗ ಪ್ರದರ್ಶನವು ಇರಲಿದೆ ಎಂದು ಮಾಹಿತಿ ನೀಡಿದರು.

ಮೂರು ದಿನದ ಪ್ರವಾಸಿ ಉತ್ಸವದಲ್ಲಿ ವಿವಿಧ ಇಲಾಖೆಗಳ ವತಿಯಿಂದ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಸೂಚಿಸಿದರು. ಸ್ವಚ್ಛತೆ, ಇ-ಶೌಚಾಲಯದ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಡಿವೈಎಸ್‌ಪಿ ಸುಂದರರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಜಿಲ್ಲೆಯ ವಿವಿಧ ಪ್ರವಾಸಿ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT