ಕ್ಷಯರೋಗದ ಸಮೀಕ್ಷೆಗೆ ಸೂಚನೆ

7
ನಾಳೆಯಿಂದ ಜಿಲ್ಲೆಯಲ್ಲಿ ಆಂದೋಲನ

ಕ್ಷಯರೋಗದ ಸಮೀಕ್ಷೆಗೆ ಸೂಚನೆ

Published:
Updated:
ಪಿ.ಐ. ಶ್ರೀವಿದ್ಯಾ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ 2ರಿಂದ 13ರ ತನಕ ಕ್ಷಯರೋಗ ಪತ್ತೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಕ್ಷಯರೋಗ ನಿರ್ಮೂಲನೆಗೆ ಪಣ ತೊಡಬೇಕು. ಜಿಲ್ಲೆಯಲ್ಲಿ ಗುರುತಿಸಲಾದ ಎಲ್ಲಾ ಮನೆಗಳಿಗೂ ಭೇಟಿ ಮಾಡಿ ಕ್ಷಯರೋಗದ ಸಮೀಕ್ಷೆ ನಡೆಸಬೇಕು. ಜಿಲ್ಲೆಯಲ್ಲಿ ಗುರುತಿಸಲಾದ ಎಲ್ಲಾ ಮನೆಗಳಿಗೂ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಮಾತನಾಡಿ, ಜಿಲ್ಲೆಯ 39,675 ಉದ್ದೇಶಿತ ಮನೆಗಳಲ್ಲಿ ಕ್ಷಯರೋಗದ ಆಂದೋಲನ ನಡೆಸಲು ತೀರ್ಮಾನಿಸಿದ್ದೇವೆ. ಆಶಾ ಕಾರ್ಯಕರ್ತರ ತಂಡವು ಮನೆಮನೆಗೆ ಭೇಟಿ ನೀಡಿ ಕ್ಷಯರೋಗದ ಲಕ್ಷಣ, ಚಿಕಿತ್ಸೆ ಇವುಗಳ ಬಗ್ಗೆ ಸಮಾಲೋಚನೆ ನಡೆಸಿ, ಅವಶ್ಯಪಟ್ಟ ರೋಗಿಗಳ ಕಫದ ಮಾದರಿ ಸಂಗ್ರಹಿಸಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಮೂರು ತಾಲ್ಲೂಕು ವ್ಯಾಪ್ತಿಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಮತ್ತು ಕಿರಿಯ ಪುರುಷ ಆರೋಗ್ಯ ಸಹಾಯಕಿಯರು, ಹಿರಿಯ ಮಹಿಳಾ ಮತ್ತು ಪುರುಷ ಆರೋಗ್ಯ ಸಹಾಯಕರಿಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !