ಬುಧವಾರ, ಜನವರಿ 29, 2020
19 °C
ಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಸೂಚನೆ

ಪರಿಹಾರ ವಿತರಣೆ: ವಿಳಂಬ ಸಲ್ಲದು: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಪರಿಹಾರ ತಲುಪಿಸುವ ಕುರಿತು ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ‘ಸಂತ್ರಸ್ತರಿಗೆ ಬೆಳೆ ಹಾಗೂ ಮನೆ ಹಾನಿ ಪರಿಹಾರ ಸಂಬಂಧ ಸಮರ್ಪಕವಾಗಿ ತಲುಪಬೇಕು. ಆ ನಿಟ್ಟಿನಲ್ಲಿ ಸಂತ್ರಸ್ತರಿಂದ ಬ್ಯಾಂಕ್ ಖಾತೆ ಪಡೆದು ಪರಿಹಾರ ಒದಗಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎನ್‌ಪಿಸಿಐ (ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ) ರಾಷ್ಟ್ರೀಯ ಪಾವತಿ ನಿಗಮದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು’ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಅರ್ಹ ಸಂತ್ರಸ್ತರಿಗೆ ಪರಿಹಾರ ದೊರೆಯಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಹೋಬಳಿವಾರು ಸಂತ್ರಸ್ತರ ಮಾಹಿತಿ ಪಡೆದು ಬ್ಯಾಂಕ್‌ಗಳಿಂದ ಪರಿಹಾರ ವಿತರಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ ಮಾತನಾಡಿ, ಸಂತ್ರಸ್ತರಿಗೆ ಬ್ಯಾಂಕ್‌ಗಳ ಮೂಲಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಈ ಸಂಬಂಧ ಬ್ಯಾಂಕ್‌ಗಳ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವ ಸಂಬಂಧ ಇನ್ನೂ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದೂ ಅವರು ಹೇಳಿದರು.

ಭಾರತೀಯ ಸ್ಟೇಟ್ ಬ್ಯಾಂಕ್‌ನ ನಗರದ ಮುಖ್ಯ ಶಾಖೆಯ ವ್ಯವಸ್ಥಾಪಕ ದಿನೇಶ್ ಪೈ ಹಾಜರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು