ಭಾನುವಾರ, ಏಪ್ರಿಲ್ 5, 2020
19 °C
ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ಖಡಕ್‌ ಸೂಚನೆ

ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ನಿಗಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: 'ಕೋವಿಡ್‌ -19 ವೈರಸ್‌‘ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್‍ಗಳು, ಹೋಂ ಸ್ಟೇಗಳು ಹಾಗೂ ಹೋಟೆಲ್‍ಗಳಲ್ಲಿ ಹೆಚ್ಚಿನ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

’ಕೋವಿಡ್‌ -19 ವೈರಸ್ ಬೆಂಗಳೂರಿನಲ್ಲೂ ಕಂಡುಬಂದಿದೆ. ಜಿಲ್ಲೆಯಲ್ಲಿಯೂ ಸಹ ಇನ್ನಷ್ಟು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕಿದೆ‘ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

’ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಕೋವಿಡ್‌–19 ವೈರಸ್ ಸಂಬಂಧಿಸಿದಂತೆ ಪ್ರವಾಸಿ ತಾಣಗಳಲ್ಲಿ ಜಾಗೃತಿ ಮೂಡಿಸಬೇಕು‘ ಎಂದು ಡಿಸಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು, ಪೋಸ್ಟರ್, ಬ್ಯಾನರ್, ಪ್ರವಾಸಿ ತಾಣಗಳು, ಗಡಿಪ್ರದೇಶ ಸೇರಿದಂತೆ ಜಿಲ್ಲೆಯ ಜನದಟ್ಟಣೆ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಅವರು ನೀಡಿದರು.

ಮಾಹಿತಿ ನೀಡಿ

ವಿದೇಶದಿಂದ ಬರುವವರ ಬಗ್ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗೆ (ಮೊ: 94498 43263) ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಕೋರಿದರು.

104 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ ಎಂದು ವಿವರಿಸಿದರು. 

ವೈದ್ಯಕೀಯ ಕಾಲೇಜಿನ ಅಧೀಕ್ಷಕ ಲೋಕೇಶ್ ಅವರು, ಜಿಲ್ಲಾ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಹತ್ತು ಹಾಸಿಗೆ ಒಳಗೊಂಡ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ. ಅಗತ್ಯ ಔಷಧಿ ಲಭ್ಯವಿದೆ ಎಂದು ತಿಳಿಸಿದರು.

ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಡಾ.ಆನಂದ್ ಹಾಜರಿದ್ದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು