ಶನಿವಾರ, ಜನವರಿ 28, 2023
24 °C

ನಗರದ ವಿವಿಧೆಡೆ ಜಿಲ್ಲಾಧಿಕಾರಿ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಡಿಕೇರಿಯ ಅಶೋಕಪುರ, ಮಹದೇವಪೇಟೆ, ಮುತ್ತಪ್ಪ ದೇವಾಲಯ, ಎ.ವಿ ಶಾಲೆ, ಕೆಎಸ್ಆರ್‌ಟಿಸಿ ಘಟಕ, ಹೊಸ ಬಡಾವಣೆ ಮತ್ತಿತರ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

18 ವರ್ಷ ತುಂಬಿದವರು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಸ್ಥಳಾಂತರ ಆಗಿದ್ದಲ್ಲಿ ಸರಿಪಡಿಸಿಕೊಳ್ಳಬೇಕು.  ಈ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಡಳಿತ ಜೊತೆ ಸಹಕರಿಸುವಂತೆ ಕೋರಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು