ಕುಶಾಲನಗರ: ಪಟ್ಟಣದ ಬಡಾವಣೆಗಳು ಪ್ರವಾಹದಿಂದ ಜಲಾವೃತಗೊಳ್ಳುವುದನ್ನು ತಪ್ಪಿಸಲು ಕಾವೇರಿ ನದಿಯ ಹೂಳು ತೆರವುಗೊಳಿಸಿ ನಿರ್ವಹಣೆ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಕಾವೇರಿ ನದಿ ಭಾಗದಲ್ಲಿ ಬುಧವಾರ ಪರಿಶೀಲನೆ ನಡೆಸಿದ ಅವರು, ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆ ಪ್ರಮುಖರು ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಪ್ರಥಮ ಹಂತದಲ್ಲಿ ಕೊಪ್ಪ ಕಾವೇರಿ ಸೇತುವೆ ಕೆಳಭಾಗದಲ್ಲಿ ನದಿ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಈ ಸಂಬಂಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಅಂದಾಜು ಪಟ್ಟಿಯನ್ನು ಸಲ್ಲಿಸಿದ್ದು, ಗುರುವಾರ ಬೆಳಗ್ಗೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು ಎಂದು ಅವರು ಹೇಳಿದರು.

ಸಾಯಿ ಬಡಾವಣೆ ಭೇಟಿ ಪರಿಶೀಲನೆ : ಸಾಯಿ ಬಡಾವಣೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಪೆಟ್ರೋಲ್ ಬಂಕ್ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಕೆಲವು ವ್ಯಕ್ತಿಗಳ ಆಕ್ಷೇಪ ಇದ್ದ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ತಾಂತ್ರಿಕ ವರದಿ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.