ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರ; ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Published 8 ಏಪ್ರಿಲ್ 2024, 5:33 IST
Last Updated 8 ಏಪ್ರಿಲ್ 2024, 5:33 IST
ಅಕ್ಷರ ಗಾತ್ರ

ಕುಶಾಲನಗರ: ಸಮೀಪದ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದ ನಿವಾಸಿಗಳು ಮೂಲಭೂತ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.

ಪುನರ್ವಸತಿ ಕೇಂದ್ರದಲ್ಲಿ 354 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರು, ರಸ್ತೆ, ಚರಂಡಿ, ಉದ್ಯಾನ, ಸಮುದಾಯ ಭವನ, ಅಂಗನವಾಡಿ, ನ್ಯಾಯಬೆಲೆ ಅಂಗಡಿ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಿಕೊಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ‌. ಜೊತೆಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸೌಕರ್ಯಗಳನ್ನು ಸರಿಯಾಗಿ ನೀಡಿಲ್ಲ ಎಂದು ನಿವಾಸಿಗಳು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹಲವು ಬಾರಿ ಸಂಬಂಧಪಟ್ಟ ಇಲಾಖೆಗೆ ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದ ಅನಿತಾ, ಸುರೇಶ್ ಅವರು ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ಒಮ್ಮತದಿಂದ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ವೈಸಿ ಮುತ್ತ, ಅನಿತಾ, ಸುರೇಶ, ದೇವಿ, ಮುತ್ತ, ಪಾರ್ವತಿ, ಶಂಕರ, ಬಾಬು, ಮಣಿ, ಸುರೇಶ, ಬೆಳ್ಳಿ, ರಾಜು, ರವಿ, ಜಾನು, ಗೌರಿ, ಚಿಪ್ಪ,ರಮೇಶ,ವೈಕೆ ಚೌಮ, ಬೇಬಿ, ಲಕ್ಷ್ಮಿ ಹಾಗೂ ನೂರಾರು ಆದಿವಾಸಿ ನಿವಾಸಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT