ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳ್ಳೂರು: ಶಾಲೆಯಲ್ಲಿ ಹಸಿರು ದೀಪಾವಳಿ

ಬಣ್ಣ ಬಣ್ಣದ ದೀಪಗಳನ್ನು ಹಚ್ಚಿ ಸಂಭ್ರಮಿಸಿದ ವಿದ್ಯಾರ್ಥಿಗಳು
Last Updated 29 ಅಕ್ಟೋಬರ್ 2019, 16:07 IST
ಅಕ್ಷರ ಗಾತ್ರ

ಶನಿವಾರಸಂತೆ: ಸಮೀಪದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರಸ್ನೇಹಿ ಹಸಿರು ದೀಪಾವಳಿ ಆಚರಣೆ ಮಾಡಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ದೀಪಗಳನ್ನು ಹಚ್ಚಿ ಸಂಭ್ರಮಿಸಿದರು.

ಶಾಲೆಯ ಇಕೋ ಕ್ಲಬ್ ಸಂಚಾಲಕ ಶಿಕ್ಷಕ ಸಿ.ಎಸ್.ಸತೀಶ್ ಮಾತನಾಡಿ, ‘ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ಬಣ್ಣದ ಆಕಾಶ ಬುಟ್ಟಿಗಳನ್ನು ಮನೆಯಲ್ಲಿರಿಸಿ ಹಬ್ಬ ಆಚರಿಸಬೇಕು. ಪಟಾಕಿ ಹೊಡೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ’ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿಂದು ಸುರೇಶ್, ಸದಸ್ಯರಾದ ಗುಲಾಬಿ, ಕವಿತಾ, ಧರ್ಮಾವತಿ, ಆಶಾ ಕಾರ್ಯಕರ್ತೆ ರೂಪಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT