ಮೊಗೇರ ಸಮಾಜದ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣೆ

7

ಮೊಗೇರ ಸಮಾಜದ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣೆ

Published:
Updated:
Deccan Herald

ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಮೊಗೇರ ಸಮಾಜದ ಸಂತ್ರಸ್ತ ಕುಟುಂಬಗಳಿಗೆ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ಆಹಾರ ಪದಾರ್ಥಗಳ ಕಿಟ್‌ಗಳನ್ನು ಸೋಮವಾರ ವಿತರಿಸಲಾಯಿತು.

ನಗರದ ಅರಸು ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ 140 ಕುಟುಂಬಗಳಿಗೆ ಅಕ್ಕಿ, ಬೇಳೆ, ರಾಗಿ, ಎಣ್ಣೆ, ಉಪ್ಪು, ಸಕ್ಕರೆ ಇನ್ನಿತರ ದಿನಸಿ ವಸ್ತುಗಳನ್ನು ಸಮಾಜದ ಪ್ರಮುಖರು ವಿತರಿಸಿದರು.

ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಬಿ.ಶಿವಪ್ಪ ಮಾತನಾಡಿ, ‘ರಾಜ್ಯದಿಂದ ಸಾಕಷ್ಟು ಪ್ರಮಾಣದಲ್ಲಿ ಆಹಾರ ಸಾಮಾಗ್ರಿಗಳು ಬಂದಿದ್ದರೂ ಇತರ ಸಮುದಾಯದವರಿಗೆ ಸಿಕ್ಕಂತೆ ನಮ್ಮ ಸಮುದಾಯದವರಿಗೆ ಸಾಮಾಗ್ರಿಗಳು ಸಿಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಗೌರವ ಅಧ್ಯಕ್ಷ ಪಿ.ಎಂ.ರವಿ ಮಾತನಾಡಿ, ಸಂಘ, ಬ್ಯಾಂಕ್‌ಗಳಿಂದ ಸಾಲ ಮಾಡಿ ಕಷ್ಟಪಟ್ಟು ಮನೆಗಳನ್ನು ನಿರ್ಮಿಸಿಕೊಂಡಿದ್ದ ಮೊಗೇರ ಕುಟುಂಬಗಳು ಇಂದು ಪ್ರಕೃತಿ ವಿಕೋಪಕ್ಕೆ ಸಿಲುಕಿ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಸಮಾಜದ ಮೂಲಕ ಸಂತ್ರಸ್ತರಿಗೆ ಸಂಪೂರ್ಣ ಸಹಕಾರ ನೀಡಲಾಗುವುದೆಂದು ಭರವಸೆ ನೀಡಿದರು.

ಪ್ರಧಾನ ಕಾರ್ಯದರ್ಶಿ ಎಂ.ಜಿ.ಚಂದ್ರು, ಹಿರಿಯ ಸದಸ್ಯ ಬಾಬು, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಸುರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜು, ಪಿ.ಸಿ.ರಮೇಶ್,  ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮೋಹನ ಮತ್ತಿತರರು ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !