ಸೋಮವಾರಪೇಟೆ: ‘ಕಾಫಿ ಬೆಳೆಗಾರರು ಅನೇಕ ವರ್ಷಗಳಿಂದ ಪೈಸಾರಿ ಜಾಗದಲ್ಲಿ ಕಾಫಿ, ಕಾಳುಮೆಣಸು ಬೆಳೆಯುವ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. 5 ಎಕರೆಯಷ್ಟು ಭೂಮಿ ಹೊಂದಿರುವ ಸಣ್ಣ ಕಾಫಿ ಬೆಳೆಗಾರರಿಗೆ ಭೂ ಮಂಜೂರಾತಿ ಮಾಡಬೇಕು’ ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲು ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎಂ.ಲವ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಾಸಿಕ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ವ್ಯವಸಾಯಕ್ಕೆ ಯೋಗ್ಯವಾಗಿರುವ ಭೂಮಿಯನ್ನು ಸಿ ಮತ್ತು ಡಿ (ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ) ಭೂಮಿ ಎಂದು ಪರಿಗಣಿಸಿ ಅರಣ್ಯ ಇಲಾಖೆಗೆ ವರ್ಗಾಯಿಸಿರುವುದು ಸರಿಯಲ್ಲ. ವ್ಯವಸಾಯಕ್ಕೆ ಯೋಗ್ಯ ಭೂಮಿಯನ್ನು ಪಟ್ಟಿಯಿಂದ ತೆಗೆದು, ಅರಣ್ಯ ಇಲಾಖೆಯಿಂದ ಹಿಂಪಡೆಯಬೇಕು. ಸಿ ಮತ್ತು ಡಿ ಭೂಮಿಗೆ ಹಕ್ಕುಪತ್ರ ಪಡೆಯಲು ಕಾಫಿ ಬೆಳೆಗಾರರು ಹೋರಾಟ ಮಾಡಬೇಕಾಗಿದೆ. ಎಲ್ಲ ಸಂಘ ಸಂಸ್ಥೆಗಳ ಸಹಕಾರ ಪಡೆದು ಕಾಫಿ ಬೆಳೆಗಾರರ ಸಂಘದ ನೇತೃತ್ವದಲ್ಲಿ ಹೋರಾಟ ಮುಂದುವರಿಸಲು ನಿರ್ಧರಿಸಲಾಯಿತು.

ಸರ್ಕಾರಿ ಒತ್ತುವರಿ ಭೂಮಿಯನ್ನು ಪ್ಲಾಂಟೇಶನ್ ಉದ್ದೇಶಕ್ಕೆ ಲೀಸ್ಗೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಸಿ ಅಂಡ್ ಡಿ ಎಂದು ಪರಿಗಣಿಸದೆ ಸರ್ಕಾರವು ಎಲ್ಲರಿಂದಲೂ ಅರ್ಜಿ ಪಡೆಯಬೇಕು. ತಾಲ್ಲೂಕಿನಲ್ಲಿ ಕಾಫಿ ಕೊಯ್ಲು ಪ್ರಾರಂಭವಾಗಿದ್ದು, ಬೆಳೆಗಾರರು ಕೆ.ಜಿ. ಲೆಕ್ಕದಲ್ಲೇ ಕೂಲಿ ಕೊಡಬೇಕಿದೆ. ಬುಷೆಲ್ನಲ್ಲಿ ಅಳೆದರೆ ಸರಿಯಾದ ಲೆಕ್ಕ ಸಿಗುವುದಿಲ್ಲ. ಕಾರ್ಮಿಕರ ಕೆಲಸ ಅವಧಿಯನ್ನು ಬೆಳಿಗ್ಗೆ 9ರಿಂದ ಸಂಜೆ 4.30 ಗಂಟೆವರೆಗೆ ನಿರ್ಧರಿಸಬೇಕು. ಬೆಳೆಗಾರರು ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಕಾಲಿಕ ಮಳೆಯಿಂದ ಕಾಫಿ ಫಸಲು ಹಾನಿಯಾಗಿದೆ. ಈಗ ಕಾಫಿಗೆ ಉತ್ತಮ ಬೆಲೆ ಸಿಗುತ್ತಿದೆ. ಕಳ್ಳತನ ಹೆಚ್ಚಾಗುವ ಸಂಭವವಿದ್ದು, ಕೆಲಸಕ್ಕೆ ಕಾರ್ಮಿಕರನ್ನು ನೇಮಿಸಿಕೊಳ್ಳುವ ಸಂದರ್ಭ, ಪೊಲೀಸ್ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬೆಳೆಗಾರರಿಗೆ ತಿಳಿಸಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಎಚ್.ಕೆ.ಪ್ರಸಿ, ಕಾರ್ಯದರ್ಶಿ ಎ.ಎಂ.ಮನೋಹರ್, ಖಜಾಂಚಿ ಎಸ್.ಎಂ.ಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.