ಮಂಗಳವಾರ, ಮಾರ್ಚ್ 31, 2020
19 °C

ಮುಸ್ಲಿಂ ವಿ.ವಿ ಸ್ಥಾಪನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಪೋಕ್ಲು (ಕೊಡಗು ಜಿಲ್ಲೆ): ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು ಎಂದು ರಾಜ್ಯ ವಕ್ಫ್ ಮಂಡಳಿ ಸದಸ್ಯ ಶಾಫಿ ಸಅದಿ ಆಗ್ರಹಿಸಿದರು.

ಸಮೀಪದ ಎಮ್ಮೆಮಾಡು ಮಖಾಂ ಉರುಸ್ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

’ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ. ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆಗೊಂಡರೆ ಶೇಕಡ 35ರಷ್ಟು ಸೀಟುಗಳು ಮುಸ್ಲಿಂ ಸಮುದಾಯಕ್ಕೆ ದೊರೆಯುತ್ತವೆ. ಇದರಿಂದ ಅವರು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎನ್ನುವುದೇ ನಮ್ಮ ಉದ್ದೇಶ’ ಎಂದರು.

‘ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಓದಬೇಕು. ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಆಗ ಮಾತ್ರ ಸಮುದಾಯದ ಪ್ರಗತಿ ಸಾಧ್ಯ’ ಎಂದು ಅವರು ತಿಳಿಸಿದರು.

‘ಕಳೆದ 70 ವರ್ಷಗಳಿಂದ ನಮ್ಮನ್ನಾಳಿದ ಸರ್ಕಾರಗಳು ಮುಸ್ಲಿಂ ಸಮುದಾಯದ ಸ್ಥಿತಿಗತಿಯ ಬಗ್ಗೆ ವರದಿ ತಯಾರಿಸಿರುವುದನ್ನು ಬಿಟ್ಟರೆ ಅವರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ರಾಜಕಾರಣಿಗಳು ಹಿಂದೂ-ಮುಸ್ಲಿಮರನ್ನು ಒಡೆಯುವ ಕಾರ್ಯವನ್ನು ಕೈಬಿಟ್ಟು ಮುಸ್ಲಿಂ ಜನಾಂಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು. ಮುಂದಿನ ಬಜೆಟ್‌ನಲ್ಲಿ ಶೇ. 15ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಹಾಗೂ ಅದಕ್ಕಾಗಿ ಟಾಸ್ಕ್ ಫೋರ್ಸ್ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)