ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು: ಕಾವೇರಿ ಎಕ್ಸ್ ಪ್ರೆಸ್ ಹೆದ್ದಾರಿ ನಾಮಕರಣಕ್ಕೆ ಒತ್ತಾಯ

ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಏಳು ನಿರ್ಣಯ ಮಂಡನೆ
Last Updated 6 ಮಾರ್ಚ್ 2023, 4:22 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಎರಡು ದಿನಗಳ ಕಾಲ ಇಲ್ಲಿನ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಬಹಿರಂಗ ಅಧಿವೇಶನದಲ್ಲಿ ಏಳು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರೇವತಿ ರಮೇಶ್ ನಿರ್ಣಯ ಮಂಡಿಸಿದರು. ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್ ಹಾಜರಿದ್ದರು.

* ಮಡಿಕೇರಿ ನಗರದಲ್ಲಿ ಕನ್ನಡ ಭವನ ನಿರ್ಮಿಸಲು ಸರ್ಕಾರ ₹ 3 ಕೋಟಿ ಅನುದಾನ ಬಿಡುಗಡೆ ಮಾಡಬೇಕು.

* ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಅನುದಾನ ನೀಡಬೇಕು.

* ಮಾನವ ಮತ್ತು ವನ್ಯಜೀವಿ ಸಂಘರ್ವ ತಡೆಗಟ್ಟಲು ಸೂಕ್ತ ಯೋಜನೆ ರೂಪಿಸಬೇಕು.

* ನೂತನ ತಾಲ್ಲೂಕುಗಳಾದ ಪೊನ್ನಂಪೇಟೆ ಮತ್ತು ಕುಶಾಲನಗರಕ್ಕೆ ಮಿನಿ ವಿಧಾನಸೌಧ ನಿರ್ಮಿಸಿ ಕೊಡಬೇಕು.

*ಜಿಲ್ಲೆಯ ರೈತರಿಗೆ ಆಧುನಿಕ ಕೃಷಿ ಉಪಕರಣಗಳನ್ನು ಸಬ್ಸಿಡಿ ದರದಲ್ಲಿ ನೀಡಬೇಕು.

‘*ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಅಗತ್ಯ ಅಧ್ಯಾಪಕರನ್ನು ನೇಮಿಸಬೇಕು.

*ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಕಾವೇರಿ ಎಕ್ಸ್‌ಪ್ರೆಸ್ ಹೆದ್ದಾರಿ ಎಂದು ನಾಮಕರಣ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT