ಸೋಮವಾರಪೇಟೆ: ಲವ್ ಜಿಹಾದ್ಗೆ ಕಠಿಣ ಕಾನೂನು ತರಬೇಕು ಎಂದು ಆಗ್ರಹಿಸಿ, ಹಿಂದೂ ಜಾಗರಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ದೇಶದೆಲ್ಲೆಡೆ ಇಸ್ಲಾಮಿಕ್ ಮತಾಂಧರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇಶ ವಿರೋಧಿ, ಹಿಂದೂ ವಿರೋಧಿ ನೀತಿಯೊಂದಿಗೆ ಸಮಾಜಘಾತುಕ ಕೃತ್ಯದಲ್ಲಿ ತೊಡಗಿದ್ದಾರೆ. ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿಸುವ ನಾಟಕವಾಡಿ, ಲವ್ ಜಿಹಾದ್ಗೆ ತಳ್ಳುತ್ತಿದ್ದಾರೆ. ಇದರಿಂದಾಗಿ ಅನೇಕ ಹೆಣ್ಣುಮಕ್ಕಳು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣದಿಂದ ಕಠಿಣ ಕಾನೂನು ತರುವಂತೆ ತಹಶೀಲ್ದಾರ್ ಗೋವಿಂದರಾಜ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

‘ಹರಿಯಾಣದ ಫರೀದಾಬಾದ್ನಲ್ಲಿ ಮತಾಂಧನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಹಿಂದೂ ಯುವತಿಯನ್ನು ನಡುರಸ್ತೆಯಲ್ಲಿ ಹತ್ಯೆಗೈದ ತೌಫಿಕ್ನನ್ನು ಗಲ್ಲಿಗೇರಿಸಬೇಕು. ಇಂಥ ಸಮಾಜಘಾತಕ ಕೃತ್ಯಕ್ಕೆ ಕಡಿವಾಣ ಹಾಕುವಂತೆ’ ಹಿಂಜಾವೇ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ರೂಪ, ಸತೀಶ್, ಸುನೀಲ್ ಮಾದಾಪುರ, ಬೋಜೇಗೌಡ, ಎಚ್.ಕೆ. ಮಾದಪ್ಪ, ಸಿ.ಪಿ. ಗೋಪಾಲ್, ದರ್ಶನ್ ಜೋಯಪ್ಪ, ಮಹೇಶ್ ತಿಮ್ಮಯ್ಯ, ಜಿ.ಬಿ. ಸೋಮಯ್ಯ, ಯಡವನಾಡು ರಮೇಶ್, ಶಾಂತಳ್ಳಿ ಪ್ರತಾಪ್, ಬೀರೇಬೆಟ್ಟ ವೇಣು, ಇದ್ದರು.

ಮನವಿ ಸಲ್ಲಿಕೆಗೂ ಮುನ್ನ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮೆರವಣಿಗೆಯ ಮೂಲಕ ತಾಲ್ಲೂಕು ಕಚೇರಿಗೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.