ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸು ಹಾದಿಯಲ್ಲಿ ಸಾಗುತ್ತಿರುವ ಸಿದ್ದರಾಮಯ್ಯ: ಶಾಸಕ ಡಾ.ಮಂತರ್‌ಗೌಡ

Published 20 ಆಗಸ್ಟ್ 2023, 12:44 IST
Last Updated 20 ಆಗಸ್ಟ್ 2023, 12:44 IST
ಅಕ್ಷರ ಗಾತ್ರ

ಮಡಿಕೇರಿ: ಡಿ.ದೇವರಾಜ ಅರಸು ಅವರ ಮಾದರಿಯಲ್ಲಿ ಸಿದ್ದರಾಮಯ್ಯ ಅವರು ಆಡಳಿತ ನಡೆಸುತ್ತಿದ್ದಾರೆ ಎಂದು ಶಾಸಕ ಡಾ.ಮಂತರ್‌ಗೌಡ ಶ್ಲಾಘಿಸಿದರು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ಘಟಕ ಏರ್ಪಡಿಸಿದ್ದ ಡಿ. ದೇವರಾಜ ಅರಸು ಅವರ 108ನೇ ಮತ್ತು ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಡಿ.ದೇವರಾಜ ಅರಸು ಹಾಗೂ ಸಿದ್ದರಾಮಯ್ಯ ಇಬ್ಬರೂ ನಾಯಕರು ನೀಡಿದ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಧ್ಯೇಯದ ಆಡಳಿತ ಎಲ್ಲಾ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ. ನಾನೂ ಯಾವತ್ತೂ ಬಡವರ, ಶೋಷಿತರ, ದಮನಿತರ ಪರವಾಗಿ ಅವರ ಧ್ವನಿಯಾಗಿ ಇರುತ್ತೇನೆ’ ಎಂದು ಭರವಸೆ ನೀಡಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿ, ‘ದೇಶದ ಪ್ರಧಾನಿ ಹೇಗಿರಬೇಕು ಎನ್ನುವುದಕ್ಕೆ ರಾಜೀವ್ ಗಾಂಧಿಯವರು, ರಾಜ್ಯದ ಮುಖ್ಯಮಂತ್ರಿ ಹೇಗಿರಬೇಕು ಎಂಬುದಕ್ಕೆ ದೇವರಾಜ ಅರಸು ಅವರು ಮಾದರಿಯಾಗಿದ್ದಾರೆ’ ಎಂದು ಹೇಳಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ‘ರಾಜೀವ್‌ಗಾಂಧಿ ಅಧಿಕಾರದ ವಿಕೇಂದ್ರಿಕರಣ ಮಾಡಿದರು’ ಎಂದು ಹೇಳಿದರು.

ಹಿಂದುಳಿದ ಘಟಕದ ಅಧ್ಯಕ್ಷರಾದ ಬಾನಂಡ ಪ್ರಥ್ಯು ಮಾತನಾಡಿ, ‘ದೇವರಾಜ್ ಅರಸ್ ಅವರು ದೀನ ದಲಿತರು, ಹಿಂದುಳಿದ ವರ್ಗಗಳ ಕಲ್ಯಾಣದ ಮೂಲಕ ರಾಜ್ಯದ ಜನತೆಯನ್ನು ಉದ್ಧಾರ ಮಾಡಿದ ಮಹಾನ್ ಚೇತನ’ ಎಂದು ಬಣ್ಣಿಸಿದರು.

ಸಂವಿಧಾನದ ಪೀಠಿಕೆಯನ್ನು ಪಠಿಸಿ ಸಾಮೂಹಿಕವಾಗಿ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು.

ಕಾಂಗ್ರೆಸ್‌ನ ನಗರ ಘಟಕದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೆಪಿಸಿಸಿ ಮುಖಂಡರಾದ ಟಿ.ಪಿ.ರಮೇಶ್, ಯಾಕುಬ್, ಕೆ.ಕೆ.ಮಂಜುನಾಥ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ಸೇವಾದಳ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ, ಪರಿಶಿಷ್ಟ ವರ್ಗದ ಅಧ್ಯಕ್ಷರಾದ ಜಯೇಂದ್ರ, ಕಾರ್ಮಿಕ ವರ್ಗದ ಅಧ್ಯಕ್ಷರಾದ ದಿನೇಶ್, ಸಂಘಟನೆಯ ಬ್ಲಾಕ್ ಅಧ್ಯಕ್ಷರ ಶಿವಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT