ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಶಾಲನಗರದಲ್ಲಿ ಡಯಾಲಿಸಿಸ್ ಘಟಕ ಉದ್ಘಾಟನೆ

Published 24 ಜೂನ್ 2024, 7:18 IST
Last Updated 24 ಜೂನ್ 2024, 7:18 IST
ಅಕ್ಷರ ಗಾತ್ರ

ಮಡಿಕೇರಿ: ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕವನ್ನು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಉದ್ಘಾಟಿಸಿದರು.

ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡ ವೈಫಲ್ಯ ಪ್ರಕರಣಗಳು ಹೆಚ್ಚುತ್ತಿವೆ. ಅದಕ್ಕಾಗಿಯೇ ನಮ್ಮ ಸರ್ಕಾರ ಬಂದ ಮೇಲೆ 219 ಡಯಾಲಿಸಿಸ್ ಕೇಂದ್ರಗಳನ್ನು ತೆರೆದು 800 ಯಂತ್ರಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು‌.

ಶುಶ್ರೂಷಕರು, ಫಾರ್ಮಸಿಸ್ಟ್, ಲ್ಯಾಬ್ ಅಸಿಸ್ಟೆಂಟ್ ಗಳ ಕೊರತೆ ಸಾಕಷ್ಟು ಇದೆ. ಗುತ್ತಿಗೆ ಆಧಾರದ ಮೇಲೆ ಇವರ ನೇಮಕಾತಿಗೆ ಅನುಮತಿ ನೀಡುವಂತ ಸರ್ಕಾರದ ಮುಂದೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT