ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ ಕುರಿತ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಶುಕ್ರವಾರ ನಡೆದ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿದರು
ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ ಕುರಿತ ಸಭೆಯಲ್ಲಿ ಜಾಗೃತಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು

ತಾಯಂದಿರೊಂದಿಗೆ ಸಮಾಲೋಚನೆ ಓಆರ್‌ಎಸ್ ದ್ರಾವಣ ತಯಾರಿಕೆ ಮತ್ತು ಜಿಂಕ್ ಮಾತ್ರೆ ಬಳಕೆ ಸ್ತನ್ಯಪಾನ ಸಂಬಂಧ ಅಂಗನವಾಡಿಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ
ತಿಪ್ಪಣ್ಣ ಸಿರಸಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ
ಅತಿಸಾರ ತಡೆಯುವುದಕ್ಕಾಗಿ ಶಾಲಾ ಮಕ್ಕಳಲ್ಲಿ ಜಾಥಾ ಏರ್ಪಡಿಸಿ ಅರಿವು ಮೂಡಿಸಲಾಗುವುದು. ಶೌಚಾಲಯಗಳ ಸ್ವಚ್ಛತೆ ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಒತ್ತು ನೀಡಲಾಗಿದೆ
ರಂಗಧಾಮಪ್ಪ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ
ನಗರ ಪ್ರದೇಶಗಳಲ್ಲಿ ಸುರಕ್ಷಿತ ನೀರು ಪೂರೈಕೆ ಬಗ್ಗೆ ಗಮನಹರಿಸಲಾಗಿದೆ. ಸಂಚಾರ ತಂಡಗಳ ನಿಯೋಜನೆ ಮಾಡಬೇಕಿದೆ. ಓಆರ್‌ಎಸ್ ಮತ್ತು ಜಿಂಕ್ ಮಾತ್ರೆ ಬಗ್ಗೆ ಕಸ ಸಂಗ್ರಹಣೆ ಮತ್ತು ವಿಲೇವಾರಿ ವಾಹನಗಳನ್ನು ಬಳಸಿಕೊಂಡು ಜಾಗೃತಿ ಮೂಡಿಸಲಾಗುತ್ತದೆ
ಎಚ್.ಆರ್.ರಮೇಶ್ ಪೌರಾಯುಕ್ತ
ಅತಿಸಾರ ಭೇದಿ ನಿಯಂತ್ರಣ ಅಭಿಯಾನ ಕುರಿತು ಗ್ರಾಮೀಣ ಆರೋಗ್ಯ ತರಬೇತಿ ಮೂಲಕ ಸಮುದಾಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು
ಡಾ.ನಂಜುಂಡಯ್ಯ ಜಿಲ್ಲಾ ಶಸ್ತ್ರಚಿಕಿತ್ಸಕ