ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಂಬಾಕು, ಮದ್ಯಪಾನದಿಂದ ಅಂಗವಿಕಲತೆ: ಎ.ಎಸ್.ಐ ಚಂದ್ರಶೇಖರ್

ವಿರಾಜಪೇಟೆ: ಮಾದಕ ವಸ್ತು ವಿರೋಧಿ ದಿನಾಚರಣೆ
Published 6 ಜುಲೈ 2024, 13:39 IST
Last Updated 6 ಜುಲೈ 2024, 13:39 IST
ಅಕ್ಷರ ಗಾತ್ರ

ವಿರಾಜಪೇಟೆ: ‘ತಂಬಾಕು, ಮದ್ಯಪಾನ ಸೇವನೆಯಿಂದ ಅಂಗವಿಕಲತೆ ಹಾಗೂ ರೋಗದಿಂದ ಬಳಲಬೇಕಾಗುತ್ತದೆ’ ಎಂದು ವಿರಾಜಪೇಟೆ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಸಮೀಪದ ದೇವಣಗೇರಿ ಬಿ.ಸಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆಯಿಂದ ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಅಂತರ್ಜಾಲ ವಂಚನೆಗಳ ಕುರಿತು ಎಚ್ಚರಿಕೆ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಮೊರೆ ಹೋಗಬಾರದು. ವಿದ್ಯಾರ್ಥಿಗಳಿಗೆ ತಂಬಾಕು ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡುವುದು ಅಪರಾಧ’ ಎಂದರು.‌

ಶಾಲೆಯ ಮುಖ್ಯಶಿಕ್ಷಕ ಎಚ್.ಡಿ.ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ವಿಜು, ಶಾಲಾ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT