ಮಡಿಕೇರಿ: ಮುಂಗಾರು ಅವಧಿಗೆ ಮುನ್ನವೇ ಆರಂಭವಾಗಿದ್ದು, ಬಿರುಸಿನ ಗಾಳಿಯೊಂದಿಗೆ ಭಾರಿ ಮಳೆ ಸುರಿಯುತ್ತಿರುವುದರಿಂದ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಮಂಗಳವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ವಿಪತ್ತು ನಿರ್ವಹಣೆ ಸಮಪರ್ಕವಾಗಿ ನಿಭಾಯಿಸಬೇಕು ಎಂದು ಸೂಚಿಸಿದರು.

ಸಹಾಯವಾಣಿಗಳನ್ನು ಆರಂಭಿಸಲಾಗಿದ್ದು, ಅತಿವೃಷ್ಟಿಯಿಂದ ಆಗುವ ವಿಪತ್ತಿನ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಮಳೆಯಿಂದ ಉಂಟಾಗುವ ಹಾನಿ ಸಂಬಂಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸ್ಆಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ಧ್ವನಿ ಮುದ್ರಿತ ಸಂದೇಶದ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ವಿಪತ್ತು ನಿರ್ವಹಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ವಾಟ್ಸ್ಆ್ಯಪ್ ಗ್ರೂಪ್ ಮಾಡಿರುವಂತೆ ತಾಲ್ಲೂಕು ಮಟ್ಟದಲ್ಲಿಯೂ ಸಹ ತಹಶೀಲ್ದಾರರ ನೇತೃತ್ವದಲ್ಲಿ ವಾಟ್ಸ್ಆ್ಯಪ್ ಗುಂಪು ರಚಿಸಿಕೊಂಡು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರ್ಗಳು, ಪೊಲೀಸ್, ಅಗ್ನಿಶಾಮಕ, ಗ್ರಾಮ ಸಹಾಯಕರು, ಗೃಹರಕ್ಷಕದಳ ಗುಂಪಿಗೆ ಸೇರಿಸಿಕೊಂಡು ವಿಪತ್ತು ನಿರ್ವಹಣೆ ನಿರ್ವಹಿಸಬೇಕು ಎಂದು ಸೂಚಿಸಿದರು.

ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರ ಜೊತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಹ ಸಮನ್ವಯ ಸಾಧಿಸಿ ವಿಪತ್ತು ನಿರ್ವಹಣೆ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಿರುಗಾಳಿ ಹೆಚ್ಚಾಗಿದ್ದು, ಇದರಿಂದ ಮನೆ ಹಾಗೂ ವಿದ್ಯುತ್ ಕಂಬಕ್ಕೆ ಹೆಚ್ಚಿನ ಹಾನಿಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕು ಎಂದರು.

ಲೋಕೋಪಯೋಗಿ, ಪಂಚಾಯತ್ ಮತ್ತಿತರ ಎಂಜಿನಿಯರ್ ಇಲಾಖೆಗಳು ರಸ್ತೆ ಹಾನಿ, ರಸ್ತೆಗೆ ಮರ ಬಿದ್ದಲ್ಲಿ ಸುಗಮ ಸಾರಿಗೆ ಸಂಚಾರಕ್ಕೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಈ ಬಾರಿ ಮುಂಗಾರು ಮುಂಚಿತವಾಗಿ ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಕುಟುಂಬಗಳಿಗೆ ಕೂಡಲೇ ಪರಿಹಾರ ವಿತರಿಸಬೇಕು ಎಂದರು.

ಶಾಲಾ ಕಾಲೇಜು ಕಟ್ಟಡಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ‘ಶಾಲಾ ಕೊಠಡಿ ದುರಸ್ತಿಗೆ ಪಂಚಾಯತ್ ರಾಜ್ ಎಂಜಿನಿಯರ್ ಅವರಿಗೆ ವಹಿಸಲಾಗಿದೆ’ ಎಂದರು.

ಕಾರ್ಮಿಕ ಅಧಿಕಾರಿ ಕಾವೇರಿ ಮಾತನಾಡಿ, ‘ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ 7 ಮಕ್ಕಳನ್ನು ಪತ್ತೆಹಚ್ಚಿ ಶಾಲೆಗೆ ಸೇರ್ಪಡೆ ಮಾಡಲಾಗಿದೆ’ ಎಂದರು.

ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನಗರಾಭಿವೃದ್ಧಿ ಇಲಾಖೆಗಳು ಮುಂತಾದ ಸಂಬಂಧಪಟ್ಟ ಎಂಜಿನಿಯರಿಂಗ್ ಇಲಾಖೆಗಳು ಪ್ರವಾಹದ ಪರಿಸ್ಥಿತಿ ತಲೆದೋರದಂತೆ ತಮ್ಮ ವ್ಯಾಪ್ತಿಯ ಚರಂಡಿ, ನಾಲೆಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಗುರಿ ಇದೆ. 88 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು ಸೆಪ್ಟೆಂಬರ್ವರೆಗೂ ರಸಗೊಬ್ಬರ ಪೂರೈಕೆಯಾಗಿದೆ
ಚಂದ್ರಶೇಖರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಕಂದಾಯ ಇಲಾಖೆಗೆ ಸಂಬಂದಿದಂತೆ ಮಾಹಿತಿ ನೀಡಿದರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಎಂಜಿನಿಯರ್ಗಳು ಹಲವು ಮಾಹಿತಿ ನೀಡಿದರು.

ಇಬ್ಬರು ಸಾವು; 23 ಮನೆಗಳಿಗೆ ಹಾನಿ

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ‘ಜಿಲ್ಲಾಡಳಿತದ ಬಳಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ₹ 40 ಕೋಟಿ ಹಣವಿದೆ. ಜೊತೆಗೆ ತಹಶೀಲ್ದಾರರ ಬಳಿಯು ಸಹ ಹಣವಿದೆ’ ಎಂದು ಮಾಹಿತಿ ನೀಡಿದರು. ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ಹಾಗೂ ಈ ಹಿಂದೆ ವಿಕೋಪವಾದ ಸ್ಥಳಗಳ ಆಧಾರದ ಮೇಲೆ ಗುರುತಿಸಲಾಗಿದೆ. ಒಟ್ಟು 43 ಪ್ರವಾಹ ಪೀಡಿತ ಮತ್ತು 44 ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಹೆಚ್ಚಿನ ಬಿರುಗಾಳಿಯಿಂದ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ 23 ಮನೆಗಳಿಗೆ ಹಾನಿಯಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು. ಅಗ್ನಿಶಾಮಕ ದಳ ಪೊಲೀಸ್ ರಕ್ಷಣಾ ತಂಡ ಗೃಹರಕ್ಷಕ ದಳ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಹೋಬಳಿವಾರು ಒಟ್ಟು 20 ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಿಕೋಪಗಳು ಸಂಭವಿಸಿದಲ್ಲಿ ಸ್ಥಳೀಯ ಮಟ್ಟ ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರ

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ‘ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ನಿಯಂತ್ರಣ ಕಚೇರಿ ಸಹಾಯವಾಣಿ ಕೇಂದ್ರ ದಿನದ 24 ಗಂಟೆಗಳ ಕಾರ್ಯ ನಿರ್ವಹಿಸಲಿವೆ. ಸೆಸ್ಕ್ ಅರಣ್ಯ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಪ್ರತ್ಯೇಕ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ’ ಎಂದು ಮಾಹಿತಿ ನೀಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು ವಿಕೋಪ ಪೀಡಿತ ಪ್ರದೇಶಗಳಲ್ಲಿ ಲಭ್ಯವಿರಬೇಕಾದ ಔಷಧ ಚಿಕಿತ್ಸಾ ಉಪಕರಣಗಳ ಕುರಿತಂತೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾದ ಭೂವಿಜ್ಞಾನಿಗಳು ಭೂಕುಸಿತ ಪೀಡಿತ ಪ್ರದೇಶಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.