ಸುಂಟಿಕೊಪ್ಪ: ಸಮೀಪದ ಗುಂಡುಗುಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಬ್ಯಾಗ್ ಗಳನ್ನು ದಾನಿಗಳು ವಿತರಿಸಿದರು.

ಕುಶಾಲನಗರದ ವರ್ತಕ ಹಾಗೂ ಭಾರತೀಯ ಸೇನೆಯ ನಿವೃತ್ತ ಯೋಧ ಲವ ಅವರು ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಿದರು.

ಗುಂಡುಗುಟ್ಟಿ ದಿ.ಮಂಜನಾಥಯ್ಯ ಅವರ ಮೊಮ್ಮಗ ರಾಜೇಂದ್ರ ಮತ್ತು ಸಾಧನ ಅವರು ಎಲ್ಲ ವಿದ್ಯಾರ್ಥಿಗಳಿಗೆ ಬ್ಯಾಗ್ ಗಳನ್ನು ವಿತರಿಸಿದರು.

ರಾಜೇಂದ್ರ ಅವರು ಮಾತನಾಡಿ, ‘ದಿನದಿಂದ ದಿನಕ್ಕೆ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಈ ಶಾಲೆಯ ಉಳಿಸುವ ಕಾರ್ಯ ಮಾಡಬೇಕು’ ಎಂದರು.

ಮುಖ್ಯ ಶಿಕ್ಷಕಿ ಎಸ್.ಎಲ್.ಗೌರಮಣಿ, ಶಿಕ್ಷಕಿ ಪೂರ್ಣಿಮಾ, ಹಿರಿಯ ವಿದ್ಯಾರ್ಥಿಗಳಾದ ಎ.ಸಿ.ಪೊನ್ನಪ್ಪ, ಎಂ.ಎ.ವಸಂತ, ಶೈಲ, ರೇವಣ್ಣ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.