ಕುಶಾಲನಗರ: ಜಿಲ್ಲಾಡಳಿತ ಕೊಡಗು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣಾ ಶಿಬಿರದಲ್ಲಿ 88 ಮಂದಿ ಕಣ್ಣಿನ ತಪಾಸಣೆ ಮಾಡಿಕೊಂಡರು.
ಈ ವೇಳೆ 12 ಮಂದಿ ಕಣ್ಣಿನ ಪೊರೆ ರೋಗಿಗಳನ್ನು ಪತ್ತೆ ಹಚ್ಚಲಾಯಿತು. 46 ಮಂದಿಗೆ ಕನ್ನಡಕ ವಿತರಿಸಲಾಯಿತು.
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ಕಣ್ಣಿನ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಚಾಲನೆ ನೀಡಿ ಮಾತನಾಡಿದರು.
‘ಪ್ರತಿಯೊಬ್ಬರ ಆರೋಗ್ಯ ಕಾಪಾಡುವ ಉದ್ದೇಶದಿಂದ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು’ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಜೆ.ಫಿಲೋಮಿನಾ ಮಾತನಾಡಿ, ‘ಪ್ರತಿಯೊಬ್ಬರಿಗೂ ಕಣ್ಣಿನ ಸುರಕ್ಷತೆ ತುಂಬ ಅಗತ್ಯವಾಗಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ಮಾಡಿಸಿಕೊಂಡು ಅಗತ್ಯವಿದ್ದಲ್ಲಿ ಕನ್ನಡಕ ಬಳಸಬೇಕು’ ಎಂದರು.
ಕೇಂದ್ರದ ವೈದ್ಯಾಧಿಕಾರಿ ಡಾ. ತೇಜಸ್ವಿನಿ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಗೌರಮ್ಮ ಜಯಣ್ಣ , ಚಂದ್ರು ಮೂಡ್ಲಿಗೌಡ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.