ಕುಶಾಲನಗರ: ‘ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂಗಿ ಹಾಗೂ ಇನ್ನಿತರ ಕಾಯಿಲೆಗಳು ಹರಡದಂತೆ ಮಳೆಯನ್ನು ಲೆಕ್ಕಿಸದೆ ಪ್ರತಿ ಮನೆಗೂ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿದ ಆಶಾ ಕಾರ್ಯಕರ್ತರ ಸೇವೆ ಶ್ಲಾಘನೀಯ’ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಹೇಳಿದರು.
ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಿಂದ ಪಂಚಾಯಿತಿ ವ್ಯಾಪ್ತಿಯ 8 ಜನ ಆಶಾ ಕಾರ್ಯಕರ್ತರಿಗೆ ಛತ್ರಿ ಮತ್ತು ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಕೆ.ಕೆ.ಭೋಗಪ್ಪ, ಗಿರೀಶ್, ಪಾರ್ವತಮ್ಮ ರಾಮೇಗೌಡ, ಖತೀಜಾ, ಚೈತ್ರಾ ಮಂಜುನಾಥ್, ಶಿವಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.