ಮಡಿಕೇರಿ: ಮಳೆ ಕಡಿಮೆಯಾಯಿತೆಂದು ಮೈಮರೆಯಬಾರದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿ ಶನಿವಾರ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಉದಾಸೀನತೆ ತೋರದಂತೆ ನಿರ್ದೇಶನ ನೀಡಿದರು. ಆಗಸ್ಟ್ ಅಂತ್ಯದವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ನೋಡಲ್ ಅಧಿಕಾರಿಗಳು ಹಾಗೂ ವಿವಿಧ ಹಂತದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪ್ರಸಕ್ತ ವರ್ಷದಲ್ಲಿ ಮೇ ಕೊನೆ ವಾರ ಹಾಗೂ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದೆ. ಅದಕ್ಕೆ ಹೋಲಿಸಿದರೆ ಜುಲೈನಲ್ಲಿ ಸಾಧಾರಣಾ ಮಳೆಯಾಗಿದೆ. ಹಾಗೆಂದು, ಉದಾಸೀನತೆ ತೋರಬಾರದು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಅವರು ಅಧಿಕಾರಿಗಳನ್ನು ಎಚ್ಚರಿಸಿದರು.

ಮೇ ಕೊನೆ ವಾರದಿಂದಲೇ ಉತ್ತಮ ಮಳೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ಜಾಗೃತಿ ವಹಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ಗಳು ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಹ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಬೇಕು. ಆಯಾಯ ಸ್ಥಳೀಯ ವ್ಯಾಪ್ತಿಯಲ್ಲಿ ಮಳೆ ಹಾನಿ ಸಂಬಂಧ ತಹಶೀಲ್ದಾರರಿಗೆ ಮಾಹಿತಿ ನೀಡಬೇಕು. ಜೊತೆಗೆ, ತಹಶೀಲ್ದಾರರು ಸಹ ಸ್ಥಳ ಪರಿಶೀಲಿಸಬೇಕು ಎಂದು ಅವರು ಸೂಚಿಸಿದರು.

ಮಳೆ ಹಾನಿ ಸಂಬಂದ ಜಿಲ್ಲಾಡಳಿತದ ಬಳಿ ಹಣ ಇದೆ. ಮುಂದಿನ ಆಗಸ್ಟ್ ಅಂತ್ಯದವರೆಗೂ ಸಂಬಂಧಪಟ್ಟ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮಳೆ ಹಾನಿ ಸಂಬಂಧ ಸದಾ ಎಚ್ಚರವಹಿಸಬೇಕು ಎಂದು ಅವರು ಹೇಳಿದರು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಎಂಜಿನಿಯರ್ಗಳು ಹೆಚ್ಚುವರಿ ಕಂಬಗಳನ್ನು ಅಳವಡಿಸಬೇಕು, ವಿದ್ಯುತ್ ಪರಿವರ್ತಕಗಳನ್ನು ಅಗತ್ಯವಿರುವ ಕಡೆ ಅಳವಡಿಸಬೇಕು. ಈ ಬಗ್ಗೆ ಗಮನಹರಿಸಲೇಬೇಕು. ಜಾನುವಾರು ರಕ್ಷಣೆ ಸಂಬಂಧಿಸಿದಂತೆಯೂ ಗಮನಹರಿಸಬೇಕು ಎಂದು ಅವರು ಸೂಚಿಸಿದರು.

ವಿಡಿಯೊ ಸಂವಾದದಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಸೆಸ್ಕ್ ಎಂಜಿನಿಯರ್ ರಾಮಚಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಹಿಸಿದ್ದರು.

ಅರಣ್ಯ ಇಲಾಖೆ ಸಹ ಚೆಕ್ಪೋಸ್ಟ್ ತೆರೆಯಲಿ: ಎಸ್.ಪಿ

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ‘ಆನೆಚೌಕೂರು ಮಾಲ್ದಾರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಅರಣ್ಯ ಚೆಕ್ಪೋಸ್ಟ್ ಅನ್ನು ತೆರೆಯಬೇಕು. ಚೆಕ್ಪೋಸ್ಟ್ಗಳಲ್ಲಿ ಪೊಲೀಸ್ ಇಲಾಖೆಯವರು ಇದ್ದು ಅರಣ್ಯ ಇಲಾಖೆಯವರು ಸಹ ಚೆಕ್ಪೋಸ್ಟ್ ಆರಂಭಿಸಿದರೆ ಸಹಕಾರಿ ಆಗಲಿದೆ’ ಎಂದು ತಿಳಿಸಿದರು.

ಮರ ಬಿದ್ದು ಹಾನಿಯಾಗದಂತೆ ಎಚ್ಚರ ವಹಿಸಲು ಡಿ.ಸಿ ಸೂಚನೆ

ಅಂಗನವಾಡಿ ಶಾಲಾ ಕಟ್ಟಡಗಳು ಕಾಲೇಜು ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಮರ ಬಿದ್ದು ಸರ್ಕಾರಿ ಕಟ್ಟಡಗಳಿಗೆ ಹಾನಿ ಉಂಟಾಗದಂತೆ ಗಮನಹರಿಸಬೇಕು. ಈ ಬಗ್ಗೆ ಮುನ್ನೆಚ್ಚರ ವಹಿಸಬೇಕು. ಆದ್ದರಿಂದ ಬೀಳುವ ಹಂತದ ಮರ ಇದ್ದಲ್ಲಿ ಅರಣ್ಯ ಇಲಾಖೆಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಬೀಳುವ ಹಂತದ ಮರಗಳು ಹಾಗೂ ಅಪಾಯದಂಚಿನಲ್ಲಿರುವ ಮರಗಳ ಸಂಬಂಧ ಹತ್ತಿರದ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು. ಮಳೆ ಕಡಿಮೆ ಇದೆ ಎಂದು ಭಾವಿಸಲೇಬಾರದು. ಭಾರತೀಯ ಹವಾಮಾನ ಇಲಾಖೆ ಕಾಲ ಕಾಲಕ್ಕೆ ಮುನ್ನಚ್ಚರಿಕೆ ನೀಡಲಿದ್ದು ಅದರನ್ವಯ ಕಾರ್ಯನಿರ್ವಹಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.