ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ರೆಡ್‌ಕ್ರಾಸ್‌ಗೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಭಿನಂದನೆ

Published 23 ಡಿಸೆಂಬರ್ 2023, 6:47 IST
Last Updated 23 ಡಿಸೆಂಬರ್ 2023, 6:47 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದಲ್ಲಿಯೇ ಅತ್ಯುತ್ತಮ ಸೇವಾ ಸಾಧನೆ ಪ್ರಶಸ್ತಿ ಗಳಿಸಿದ ಕೊಡಗು ರೆಡ್‌ಕ್ರಾಸ್‌ನ್ನು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಭಿನಂದಿಸಿದರು.

ಸಂಸ್ಥೆಯ ಸಾಧನೆಗಳಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿಯೂ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವನ್ನು ಸಂಸ್ಥೆಯ ಜನಪರ ಕಾರ್ಯಕ್ರಮಗಳಿಗೆ ನೀಡುವುದಾಗಿ ಭರವಸೆ ನೀಡಿದರು.

ಕೊಡಗು ರೆಡ್‌ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ಉಪಾಧ್ಯಕ್ಷ ಎಚ್.ಟಿ.ಅನಿಲ್, ಪ್ರಧಾನ ಕಾರ್ಯದರ್ಶಿ ಎಚ್.ಆರ್.ಮುರಳೀಧರ್, ನಿರ್ದೇಶಕರಾದ ಎಂ.ಧನಂಜಯ್, ಸತೀಶ್ ರೈ, ವಿಜಯ್ ಶೆಟ್ಟಿ. ಶರತ್ ಶೆಟ್ಟಿ ಭಾಗವಹಿಸಿದ್ದರು.

ಸಂಸ್ಥೆಯ ವಿವಿಧ ಕಾರ್ಯಯೋಜನೆಗಳನ್ನು ಪರಿಗಣಿಸಿ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಬೆಂಗಳೂರಿನ ರಾಜಭವನದಲ್ಲಿ ಈಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ಪ್ರಶಸ್ತಿ ಪ್ರದಾನ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT