ಮಂಗಳವಾರ, ಜನವರಿ 21, 2020
28 °C

3ರಂದು ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಜ.3ರಂದು ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಟೂರ್ನಿ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂರು ದಿನ ಆಯೋಜಿಸಲಾಗಿದೆ. 3ರಂದು ಶಾಲಾ ಹಂತ, ಜ.4 ಮತ್ತು 5ರಂದು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಟೂರ್ನಿ ನಡೆಯಲಿದೆ ಎಂದು ಹೇಳಿದರು.

ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಜಿಲ್ಲೆಯ ನಿವಾಸಿಗಳಾಗಿರಬೇಕು. ಜತೆಗೆ, ಆಧಾರ್ ಕಾರ್ಡ್ ಸಲ್ಲಿಸಬೇಕು ಎಂದು ತಿಳಿಸಿದರು.

ಕ್ರೀಡಾಪಟುಗಳು ಜ.1ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊಬೈಲ್: 87928 42853, 63642 29203 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಜೀವನ್, ಪ್ರಮುಖರಾದ ಗಂಗಮ್ಮ, ಲವಿನ್, ಶಮ್ಮಿ ಸುಬ್ಬಯ್ಯ ಹಾಜರಿದ್ದರು.

ಪ್ರತಿಕ್ರಿಯಿಸಿ (+)