ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡೆದು ಆಳುವ ನೀತಿ; ಆತಂಕ

Last Updated 12 ಜೂನ್ 2022, 6:27 IST
ಅಕ್ಷರ ಗಾತ್ರ

ಮಡಿಕೇರಿ: ಸಮಾಜವನ್ನು ಒಡೆದು ಆಳುವ ನೀತಿ ಹೆಚ್ಚಾಗುತ್ತಿದೆ ಎಂದು ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಆತಂಕ ವ್ಯಕ್ತಪಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಸಂವಿಧಾನವನ್ನು ತಿರುಚುವ ಪ್ರವೃತ್ತಿಯೂ ಹೆಚ್ಚಾಗುತ್ತಿದೆ. ಇಂತಹ ಅನ್ಯಾಯವನ್ನು ಪ್ರಶ್ನಿಸುವ ಮನೋಭಾವ ಬೆಳೆಯಬೇಕು ಎಂದು ಹೇಳಿದರು.

ಪಠ್ಯಪುಸ್ತಕ ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸುವ ದಾರಿದೀಪ. ಆದರೆ, ಇಂದು ಪಠ್ಯ ಪರಿಷ್ಕರಿಸುವ ಮೂಲಕ ಗೊಂದಲದ ವಾತಾವರಣ ಸೃಷ್ಟಿಸಿ ಸಮಾಜದಲ್ಲಿ ಒಡಕು ಮೂಡಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ‘ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನು ತಿರುಚಿ ಬರೆದವರನ್ನು ಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಸೇರಿಸಿರುವುದು ವಿಪರ್ಯಾಸ. ಬಸವಣ್ಣನವರ ವಿಚಾರ ಇಂದಿಗೂ ಪ್ರಸ್ತುತ, ಆದರೆ ಅವರ ವಿಚಾರಗಳನ್ನು ಪುಸ್ತಕದಿಂದ ಕೈ ಬಿಟ್ಟಿರುವುದು ಖಂಡನೀಯ’ ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್, ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಕೆ.ಎ.ಯಾಕುಬ್, ಚಿಂತಕವಿ.ಪಿ.ಶಶಿಧರ್, ಸಹಮತ ವೇದಿಕೆಯ ಪ್ರಮುಖರಾದ ಅಬ್ದುಲ್ ರೆಹಮಾನ್, ದೇವಯ್ಯ, ಬಿ.ವೈ.ರಾಜೇಶ್, ನವೀನ್ ಅಂಬೆಕಲ್, ಕೆ.ಜಿ.ಪೀಟರ್, ಹ್ಯಾರಿಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT