ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ

Published 6 ಅಕ್ಟೋಬರ್ 2023, 7:44 IST
Last Updated 6 ಅಕ್ಟೋಬರ್ 2023, 7:44 IST
ಅಕ್ಷರ ಗಾತ್ರ

ಮಡಿಕೇರಿ: ಯು.ಎಸ್.ಎ.ಯ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯ ಹಾಗೂ ಎಲ್ಸ್ ವಿಯರ್ ಸಂಸ್ಥೆಯ ಸಹಯೋಗದಲ್ಲಿ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ 2 ವಿಜ್ಞಾನಿಗಳ ಪಟ್ಟಿಯಲ್ಲಿ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಜಿ.ಮಂಜುನಾಥ ಅವರು ಸತತ 4ನೇ ಬಾರಿ ಸ್ಥಾನ ಪಡೆದಿದ್ದಾರೆ.

‘ಅನಲಿಟಿಕಲ್ ಮತ್ತು ಎನರ್ಜಿ’ ವಿಷಯದಲ್ಲಿ ಇವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ 2023ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 4,509ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 89,561ನೇ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT