ಮಡಿಕೇರಿ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಅಪಘಾತ ಮಾಡಿದ ಆರೋಪಿ ತೀರ್ಥಪ್ರಸಾದ್ (51) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಈತ ಗುಡ್ಡೆಹೊಸೂರು– ಸಿದ್ದಾಪುರ ರಸ್ತೆಯ ತೆಪ್ಪದಕಂಡಿ ಸೇತುವೆ ಸಮೀಪ ಮಹೀಂದ್ರಾ ಪಿಕಪ್ ವಾಹನ ಚಾಲನೆ ಮಾಡುತ್ತಾ ಕಾಲೇಜೊಂದರ ಬಸ್ ಹಿಂಬದಿಗೆ ಡಿಕ್ಕಿಪಡಿಸಿದ್ದ. ಇದರಿಂದ ಬಸ್ಗೆ ಹಾನಿಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮದ್ಯಪಾನ ಮಾಡಿರುವುದು ಗೊತ್ತಾಗಿದೆ. ಹೀಗಾಗಿ, ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ಅಪಘಾತ ಸಂಭವಿಸುವ ಹಾಗೂ ಅಪಘಾತದಲ್ಲಿ ಜೀವಕ್ಕೆ ಹಾನಿಯಾಗುವ ಬಗ್ಗೆ ಅರಿವಿದ್ದರೂ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಪಡಿಸಿದ್ದಲ್ಲಿ ಕೊಲೆಯಲ್ಲದ ಅಪರಾಧಿಕ ನರಹತ್ಯೆ ಎಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗೆ ಕನಿಷ್ಠ 3 ವರ್ಷಗಳ ಜೈಲು ಶಿಕ್ಷೆಯನ್ನು ಅಥವಾ ಗರಿಷ್ಠ 7 ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.