ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆ : ಗ್ರಾಮಸ್ಥರ ಪ್ರತಿಭಟನೆ

Published 23 ಏಪ್ರಿಲ್ 2024, 4:06 IST
Last Updated 23 ಏಪ್ರಿಲ್ 2024, 4:06 IST
ಅಕ್ಷರ ಗಾತ್ರ

ಕುಶಾಲನಗರ: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳಗೋಟೆ ಮಡಿವಾಳ ಬೀದಿಯ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಖಾಲಿ ಕೊಡ ಹಿಡಿದು ಪಂಚಾಯತಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಮೂರು ತಿಂಗಳಿಯಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದರೂ ಹೆಬ್ಬಾಲೆ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧ್ಯಕ್ಷರು ಇತ್ತ ಕಡೆ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಕುಡಿಯುವ ನೀರಿಗಾಗಿ ಕಿಲೋಮೀಟರ್ ದೂರ ಹೋಗಿ ಬೋರ್‌ವೆಲ್‌ನಿಂದ ನೀರು ತರುವ ಪರಿಸ್ಥಿತಿ ಉಂಟಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ಹೋದರೆ, ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗೌರಮ್ಮ, ಜಯಮ್ಮ, ಲಲಿತಾ, ಸುವರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT