ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಜಿಲ ಫೈನರಿ ಮಖಾಂ ಉರುಸ್‌ಗೆ ಚಾಲನೆ

Published 24 ಫೆಬ್ರುವರಿ 2024, 6:43 IST
Last Updated 24 ಫೆಬ್ರುವರಿ 2024, 6:43 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ಕುಂಜಿಲ ಫೈನರಿ ಮಖಾಂ ಉರುಸ್ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ದೊರೆಯಿಯಿತು.

ಜುಮ್ಮಾ ನಮಾಜ್ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಯತ್ ಅಧ್ಯಕ್ಷ ಎಂ.ಎ.ಶೌಕತ್ ಅಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಉರುಸ್‌ ವಿಧ್ಯುಕ್ತ ಚಾಲನೆ ನೀಡಿದರು. ಖತಿಬರಾದ ನಿಸ್ಸಾರ್ ಅಸ್ಸಾನಿ, ಉಪಾಧ್ಯಕ್ಷ ಇಬ್ರಾಹಿಂ, ಮಾಜಿ ಅಧ್ಯಕ್ಷ ಎ.ಎ.ಮಹಮ್ಮದ್ ಹಾಜಿ, ದರ್ಸ್ ಅಧ್ಯಕ್ಷ ಅಬುಬಕರ್, ಜಮಾತ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಧಾರ್ಮಿಕ ಗುರುಗಳು ಭಾಗವಹಿಸಿದ್ದರು.

ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉರುಸ್‌ ಜರುಗಲಿದ್ದು ರಾತ್ರಿ ಕಾಂತಪುರಂ ಅಬ್ದುಲ್ ಲತೀಫ್ ಸಖಾಫಿ ಅವರ ನೇತೃತ್ವದಲ್ಲಿ ಮದನಿಯಂ ಮಜ್ಲಿಸ್‌ಗೆ, ರಈಸುಲ್ ಉಲಮಾಗೆ ಶೈಖುನಾ ಸುಲೈಮಾನ್ ಮುಸ್ಲಿಯಾರ್ ನೇತೃತ್ವ ವಹಿಸಲಿರುವರು.

26ರಂದು ಮಧ್ಯಾಹ್ನ 1.30ಕ್ಕೆ ಸೌಹಾರ್ದ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು ಅಬ್ದುಲ್ ರಶೀದ್ ಝೖನಿ ಕಾಮಿಲ್ ಸಖಾಫಿ ಕಕ್ಕಿಂಜೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಡಾ.ಮೌಲಾನ ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಧಾರ್ಮಿಕ ಭಾಷಣ ಮಾಡುವರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುಲ್ ಲತೀಫ್ ಸುಂಟಿಕೊಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಸೇರಿದಂತೆ ವಿವಿಧ ಧಾರ್ಮಿಕ ಸಾಮಾಜಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ.

ಸಂಜೆ 4ಗಂಟೆಗೆ ಭಕ್ತರಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT