ನಾಪೋಕ್ಲು: ಇಲ್ಲಿನ ಟೌನ್ ಮಹಿಯುದ್ದೀನ್ ಸುನ್ನಿ ಜುಮ್ಮಾ ಮಸೀದಿಯಿಂದ ಮೂರು ದಿನಗಳ ಕಾಲ ಆಯೋಜಿಸಿರುವ ಮಿಲಾದ್ ಸಮಾವೇಶಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಜುಮಾ ನಮಾಜ್ ಬಳಿಕ ಜಮಾಯತ್ ಅಧ್ಯಕ್ಷ ಎಂ.ಎಚ್ ಅಬ್ದುಲ್ ರೆಹಮಾನ್ ಧ್ವಜಾರೋಹಣ ನೆರವೇರಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಮಿಲಾದ್ ಸ್ವಾಗತ ಸಮಿತಿ ಗೌರವಾಧ್ಯಕ್ಷ ಉಸ್ಮಾನ್ ಹಾಜಿ ಅಧ್ಯಕ್ಷತೆಯಲ್ಲಿ ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಿತು.
ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಯತ್ ಮುದರಿಸ್ ಅಶ್ರಫ್ ಅಹ್ಸನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಹ ಕಾರ್ಯದರ್ಶಿ ರಹೀಂ ಸ್ವಾಗತಿಸಿದರು. ಜಬ್ಬಾರ್ ವಂದಿಸಿದರು. ಸ್ವಾಗತ ಸಮಿತಿ, ಓಎಸ್ಎಫ್, ಯುಎಇ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.