ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾದಕ ವಸ್ತು ಸೇವನೆಯಿಂದ ನೆಮ್ಮದಿ ಹಾಳು: ಡಿವೈಎಸ್ಪಿ

ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಡಿವೈಎಸ್ಪಿ ಮೋಹನ್‌‌‌ಕುಮಾರ್
Published 1 ಜುಲೈ 2024, 6:00 IST
Last Updated 1 ಜುಲೈ 2024, 6:00 IST
ಅಕ್ಷರ ಗಾತ್ರ

ವಿರಾಜಪೇಟೆ: ‘ಮಾದಕ ವಸ್ತುಗಳ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವುದರೊಂದಿಗೆ, ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯಲು ಕಾರಣವಾಗುತ್ತಿದೆ’ ಎಂದು ಡಿವೈಎಸ್ಪಿ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು.

ಪಟ್ಟಣದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯಿಂದ ಈಚೆಗೆ ನಡೆದ ಅಂತರರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.

‘ಪ್ರಸ್ತುತ ಸಮಾಜದ ಯುವ ಸಮುದಾಯವು ಮಾದಕವಸ್ತು ಸೇವನೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕ ದ್ರವ್ಯ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ. ಅಲ್ಲದೆ ಸಮಾಜ ಕೂಡ ಆತನನ್ನು ಧಿಕ್ಕರಿಸುತ್ತದೆ. ಯುವಕರು ಮಾದಕ ದ್ರವ್ಯಗಳ ವ್ಯಸನಿಗಳಾಗದೆ ಸಮಾಜಕ್ಕೆ ಒಳಿತನ್ನು ಬಯಸುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕು. ಮಾದಕದ್ರವ್ಯ ಮತ್ತು ವಸ್ತುಗಳ ಉಪಯೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು’ ಎಂದರು.

ಸಿ.ಪಿ.ಐ ಶಿವರುದ್ರ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಉಪಯೋಗದ ದುಷ್ಪಾರಿಣಾಮಗಳ ಬಗ್ಗೆ ಹಾಗೂ ಕಾನೂನು ಕಾಯ್ದೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಎಸ್.ಐ ರವೀಂದ್ರ, ಮಾದಕ ದ್ರವ್ಯ ಬಳಕೆಯ ಅಡ್ಡ ಪರಿಣಾಮಗಳು, ಸಮಾಜದ ಮೇಲಾಗುವ ದುಷ್ಪಾರಿಣಾಮ, ಹದಗೆಡುವ ಕುಟುಂಬ ವ್ಯವಸ್ಥೆ, ಹಣಕಾಸಿನ ಸಮಸ್ಯೆ ಸಾಕ್ಷ್ಯ ಚಿತ್ರದ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ವೇದಿಕೆಯಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಡಯನಾ ಸೋಮಯ್ಯ ಉಪಸ್ಥಿತಿತರಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT