ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ರಂದು ‘ಕೊಡಗು ದಲಿತ ರತ್ನ’ ಪ್ರಶಸ್ತಿ ಪ್ರದಾನ

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್‌ ಜನ್ಮ ದಿನಾಚರಣೆ
Last Updated 22 ಮೇ 2019, 11:47 IST
ಅಕ್ಷರ ಗಾತ್ರ

ಮಡಿಕೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಆಶ್ರಯದಲ್ಲಿ ಮೇ 26ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ‘ಕೊಡಗು ದಲಿತ ರತ್ನ’ ಪ್ರಶಸ್ತಿ ಪ್ರದಾನ ಹಾಗೂ ‘ಉತ್ತಮ ಸೇವಾ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಕಾರ್ಯಪ್ಪ ವೃತ್ತದ ಬಳಿಯ ಅಂಬೇಡ್ಕರ್ ಭವನದಿಂದ ಕಾವೇರಿ ಕಲಾಕ್ಷೇತ್ರದ ತನಕ ಮೆರವಣಿಗೆ ನಡೆಯಲಿದೆ. ಶ್ರೀಶಕ್ತಿ ವೃದ್ಧಾಶ್ರಮದ ಸುಮಾರು 30 ಹಿರಿಯರಿಗೆ, 20 ಪೌರ ಕಾರ್ಮಿಕರಿಗೆ ವಸ್ತ್ರಗಳನ್ನು ವಿತರಿಸಲಾಗುವುದು’ ಎಂದರು.

ಚಿಂತಕ ಜಯಪ್ಪ ಹಾನಗಲ್ ಅವರಿಗೆ ‘ಕೊಡಗು ದಲಿತ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಲ್ಕು ತಿಂಗಳಿನಲ್ಲಿ 500 ಕೃಷಿ ಹೊಂಡಗಳನ್ನು ನಿರ್ಮಿಸಿಕೊಟ್ಟ ಕೃಷಿ ಇಲಾಖೆ ಅಧಿಕಾರಿ ಎಂ.ವಿ.ವರದರಾಜ ಅವರಿಗೆ ‘ಉತ್ತಮ ಸೇವಾ ಪ್ರಶಸ್ತಿ’ಯನ್ನು ನೀಡಲಾಗುವುದು ಎಂದು ಹೇಳಿದರು.

ಅಂದು ನಡೆಯುವ ಕಾರ್ಯಕ್ರಮದಲ್ಲಿ ಮೈಸೂರಿನ ಶಿವಯೋಗಿ ಉರಿಲಿಂಗ ಪೆದ್ದಿಮಠ ಪೀಠಾಧ್ಯಕ್ಷ ಜ್ಞಾನಪ್ರಕಾಶ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಮಹೇಶ್ ಚಂದ್ರಗುರು, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್‌ ಭಾಗವಹಿಸಲಿದ್ದಾರೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ದಲಿತ ಸಮಾಜಕ್ಕಾಗಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 24 ಮತ್ತು 25ರಂದು ಕ್ರಿಕೆಟ್, ಕಬಡ್ಡಿ ಹಾಗೂ ವಾಲಿಬಾಲ್ ಟೂರ್ನಿಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ತಾಲ್ಲೂಕು ಸಂಚಾಲಕ ಎ.ಪಿ. ದೀಪಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT