ಮಡಿಕೇರಿ: ಕುಶಾಲನಗರದ ದುಬಾರೆ ಸಾಕಾನೆ ಶಿಬಿರಕ್ಕೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಆನೆ ಯೋಜನೆ) ಡಾ.ಮನೋಜ್ ರಾಜನ್ ಬುಧವಾರ ಭೇಟಿ ನೀಡಿದ ಪರಿಶೀಲನೆ ನಡೆಸಿದರು.

ಎರಡು ಸಾಕಾನೆಗಳ ನಡುವಿನ ಕಾದಾಟದಲ್ಲಿ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ಎಲ್ಲ ಮಾವುತರು ಮತ್ತು ಕಾವಡಿಗಳಿಂದ ಮಾಹಿತಿ ಪಡೆದರು.

ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ‘ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು’ ಎಂದು ಸೂಚಿಸಿದರು.

ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರೂಪುಗೊಳ್ಳುವವರೆಗೂ ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರಗಳನ್ನು ಪ್ರವಾಸಿಗರಿಗೆ ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-358931239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.