ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿ ನಡೆದ ದುರ್ಘಟನೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹೊಣೆಗಾರರಾಗಿದ್ದು ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ ಒತ್ತಾಯಿಸಿದ್ದಾರೆ.

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆ ತುಂಬಾ ದುಃಖಕರ. ಪ್ರವಾಸಿಗರಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸುವಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಕೃಷ್ಣ ಆರೋಪಿಸಿದರು.

ಸಾಕಾನೆಗಳಿಗೆ ಸ್ನಾನ ಮಾಡಿಸುವುದು, ಆಹಾರ ತಿನ್ನಿಸುವುದು, ಈ ಮೂಲಕ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಘಟನೆಗೆ ಕಾರಣಕರ್ತರಾಗಿದ್ದಾರೆ ಎಂದು ಹೇಳಿದರು.

ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರಿಗೆ ಸೂಕ್ತ ಭದ್ರತೆ ಒದಗಿಸಬೇಕಿದೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕನಿಷ್ಠ ವಾರಕ್ಕೊಮ್ಮೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಬೇಕು. ಇದರೊಂದಿಗೆ ಪ್ರವಾಸಿಗರು ಕೂಡ ದುಸ್ಸಾಹಸಕ್ಕೆ ಕೈ ಹಾಕಿ ತಮ್ಮ ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂದು ಸಲಹೆ ನೀಡಿದರು.

ದುಬಾರೆ, ಕಾವೇರಿ ನಿಸರ್ಗಧಾಮದ ಪ್ರವಾಸಿ ತಾಣಗಳ ಹಲವೆಡೆ, ನದಿ ತಟದಲ್ಲಿ ನಿಯಮಬಾಹಿರವಾಗಿ ಅಂಗಡಿ ಮಳಿಗೆಗಳನ್ನು ನಿರ್ಮಿಸಿರುವುದು ಕಂಡುಬಂದಿದೆ. ಈ ಬಗ್ಗೆ ತಕ್ಷಣ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಪ್ರವಾಸಿ ಕೇಂದ್ರಗಳಲ್ಲಿ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.

ಕಾವಲು ಪಡೆ ತಾಲ್ಲೂಕು ಘಟಕದ ಅಧ್ಯಕ್ಷ ಸಮೀರ್ ಮಾತನಾಡಿ, ಆಸ್ಪತ್ರೆಯಲ್ಲಿ ಮೂಲಸೌಲಭ್ಯಗಳ ಕೊರತೆ ಕಂಡುಬರುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳನ್ನು ಅಲ್ಲಿನ ವೈದ್ಯರು ಮಡಿಕೇರಿ ಅಥವಾ ಮೈಸೂರಿಗೆ ತೆರಳಲು ಸೂಚಿಸುತ್ತಿದ್ದು ಇದರಿಂದ ಬಡ ರೋಗಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.

ಕಾವಲು ಪಡೆಯ ಯುವ ಘಟಕದ ಅಧ್ಯಕ್ಷ ಸ್ವಾಮಿ, ಕಾರ್ಯದರ್ಶಿ ಮಧು ಸದಸ್ಯ ಜಾಫರ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-946453510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.