ಮಡಿಕೇರಿ: ವನ್ಯಜೀವಿಗಳಿಂದ ಒಂದೂ ಸಾವಾಗದ ರೀತಿಯಲ್ಲಿ ಯೋಜನೆ ರೂಪಿಸಿ ಎಂದು ಅರಣ್ಯಾಧಿಕಾರಿಗಳಿಗೆ ಹೇಳಿರುವೆ. ಇದಕ್ಕೆ ಅನುದಾನದ ಕೊರತೆ ಇಲ್ಲ. ಅನೇಕ ತಜ್ಞರ ಸಲಹೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖತೆ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಇಲ್ಲಿನ ಕುಶಾಲನಗರ ತಾಲ್ಲೂಕಿನ ದುಬಾರೆಯಲ್ಲಿ ಬುಧವಾರ ಕಾವೇರಿ ನದಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ತಿಳಿಸಿದರು.

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಆದಷ್ಟು ಶೀಘ್ರ ಹೆಚ್ಚಿನ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.