ಸೋಮವಾರ, ಆಗಸ್ಟ್ 8, 2022
24 °C

ಕೊಡಗು ಜಿಲ್ಲೆಯ ಕೆಲವೆಡೆ ಮತ್ತೆ ಭೂಕಂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಶುಕ್ರವಾರ ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿದೆ.

ಚೆಂಬು, ಗೂ‌ನಡ್ಕ ಭಾಗದಲ್ಲಿ ಬೆಳಿಗ್ಗೆ 10.50 ರ ಸುಮಾರಿನಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ನಸುಕಿನಲ್ಲಿಯೂ ಇಲ್ಲಿ 1.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಬೆಳಿಗ್ಗೆ 10.47ರಲ್ಲಿ ಕೊಡಗು ಜಿಲ್ಲೆಯ ಚೆಂಬು ಗ್ರಾಮದ 5.2 ಕಿ.ಮೀ ದೂರದಲ್ಲಿ 2.0. ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ನಸುಕಿನಲ್ಲಿ  1.47 ರಲ್ಲಿಯೂ 1.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು