ಬುಧವಾರ, ಜೂನ್ 29, 2022
24 °C

ಕೊಡಗು ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

ಪ್ರಜಾವಾಣಿ ವೆಬ್ ಡೆಸ್ಕ್  Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಗುರುವಾರ ನಸುಕಿನಲ್ಲಿ ಭೂಮಿ‌ ಕಂಪಿಸಿದ ಅನುಭವವಾಗಿದೆ.

ಸೋಮವಾರಪೇಟೆ ಪಟ್ಟಣದ ರೇಂಜರ್ ಬ್ಲಾಕ್ ಮತ್ತು ನೇಗಳ್ಳೆ ಗ್ರಾಮದ ಜನರಿಗೆ ನಸುಕಿನಲ್ಲಿ ಅನುಭವಕ್ಕೆ ಬಂದಿದೆ. 

ಮಡಿಕೇರಿ ತಾಲೂಕಿನ ದೇವಸ್ತೂರು ಸೇರಿದಂತೆ ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಕಂಪನದ ಅನುಭವ ಕೆಲವರಿಗಾಗಿದೆ.

ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಬೆಳಗಿನ ಜಾವ 4.30ರ ಸಮಯದಲ್ಲಿ ಭೂಕಂಪನದ ಅನುಭವ ಆಗಿದೆ. ಅದೇ ರೀತಿ ಸುಂಟಿಕೊಪ್ಪ ನಾಕೂರು, ಕಾನ್ ಬೈಲ್ ಗ್ರಾಮದಲ್ಲೂ ಸಣ್ಣ ಪ್ರಮಾಣದ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ‌ ನೀಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೊಡಗು ಜಿಲ್ಲೆಯ ಭೂ ವಿಜ್ಞಾನಿ ಶ್ರೀನಿವಾಸ್, ಪಕ್ಕದ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ 3.4 ತೀವ್ರತೆ ಕಂಪನ ಉಂಟಾಗಿದ್ದು, ಅದರ ಕಂಪನದ ಅನುಭವ ಇಲ್ಲೂ ಉಂಟಾಗಿದೆ. ಯಾವುದೆ ಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ಹೇಳಿದ್ದಾರೆ ಎಂದು ತಿಳಿಸಿದರು‌.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು