ಸಿದ್ದಾಪುರ: ಸಮೀಪದ ಕಂಡಕೆರೆ ಎಂಬಲ್ಲಿ ಆಹಾರ ಸೇವನೆ ಬಳಿಕ ಒಂದೇ ಕುಟುಂಬದ ಐವರು ಅಸ್ವಸ್ಥಗೊಂಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ.

ಸಂತೋಷ್ (30) ಮೃತಪಟ್ಟವರು.

ಸಾವಿತ್ರಿ ಎಂಬುವರ ಮನೆಯಲ್ಲಿ ಭಾನುವಾರ ರಾತ್ರಿ ಕಡುಬು ಹಾಗೂ ಕೋಳಿ ಮಾಂಸದ ಸಾರು ಮಾಡಿ ಎಲ್ಲರೂ ಸೇವಿಸಿದ್ದರು. ಊಟವಾದ ಬಳಿಕ ಸಾವಿತ್ರಿ ಹಾಗೂ ಸಂತೋಷ್, ವಿನೋದ್, ಶಶಿಧರ್, ಮಣಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಸ್ಥಳೀಯ ಪ್ರಾಥಮಿಕ ಆರೋಗ್ಯದಲ್ಲಿ ಚಿಕಿತ್ಸೆ ಕೊಡಿಸಿ ಮಡಿಕೇರಿ ಆಸ್ಪತ್ರೆಗೆ ಕರೆತರಲಾಗಿತ್ತು. ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಸಾವನ್ನಪ್ಪಿದ್ದಾರೆ. ಉಳಿದವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಹಾರ ವಿಷವಾಗಿರುವ ಶಂಕೆ ವ್ಯಕ್ತವಾಗಿದ್ದು, ಅಸ್ವಸ್ಥರ ರಕ್ತ ಮಾದರಿ ಹಾಗೂ ಮೂತ್ರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.