ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿತ್ವ ರೂಪಿಸುವ ಶಿಕ್ಷಣ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ

Published 28 ಜುಲೈ 2023, 15:19 IST
Last Updated 28 ಜುಲೈ 2023, 15:19 IST
ಅಕ್ಷರ ಗಾತ್ರ

ವಿರಾಜಪೇಟೆ: ಸ್ವತಂತ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಅನುಕೂಲವಾಗುವಂತಹ ಶಿಕ್ಷಣ ಇಂದು ಅಗತ್ಯವಾಗಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು.

ಅರಮೇರಿ ಕಳಂಚೇರಿ ಮಠದ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಕ್ಕಳ ಸುಪ್ತ ಪ್ರತಿಭೆಯನ್ನು ಗುರುತಿಸಿ ಶಿಕ್ಷಣ ನೀಡಬೇಕು. ಸ್ಪರ್ಧೆ ಅಧಿಕವಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ ಎಂದರು.

ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿದರು. ಶಾಸಕ‌ ಎ.ಎಸ್.ಪೊನ್ನಣ್ಣ ಅವರನ್ನು  ಸ್ವಾಮೀಜಿ‌ ಸನ್ಮಾನಿಸಿದರು.

ಎಸ್.ಎಂ.ಎಸ್. ಶಾಲೆಯ ಪ್ರಾಂಶುಪಾಲೆ ಕುಸುಂ ಸ್ವಾಗತಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT