ವಿರಾಜಪೇಟೆ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ವಿದ್ಯಾಸಂಸ್ಥೆಯೊಂದರ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪಿಯು ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ವಿದ್ಯಾಸಂಸ್ಥೆಗೂ ಪೋಷಕರಿಗೂ ಕೀರ್ತಿಯನ್ನು ತರಬೇಕು. ಶೈಕ್ಷಣಿಕ ಪ್ರಗತಿಯಿಂದ ಸಂಸ್ಥೆಯ ಬೆಳವಣಿಗೆ ಸಾಧ್ಯ. ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸುತ್ತಿರಬೇಕು’ ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ‘ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಮೊಬೈಲ್ ಗೀಳಿಗೆ ಮಕ್ಕಳು ಒಳಗಾಗದಂತೆ ಪೋಷಕರು ಎಚ್ಚರವಹಿಸಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಸುಮಯ ಅವರು ವಿದ್ಯಾರ್ಥಿ ವೇತನ ಹಾಗೂ ಇ-ಬಯೋಮೆಟ್ರಿಕ್ ವ್ಯವಸ್ಥೆ ಮಾಡಿಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಪೋಷಕರು ಹಾಗೂ ಉಪನ್ಯಾಸಕರ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಸಂವಾದ ನಡೆಯಿತು. ಉಪನ್ಯಾಸಕರಾದ ರೈಮಂಡ್, ಸುಮಲತಾ, ದಮಯಂತಿ, ಕಾಂತಿ, ಪವಿತ್ರ ಕುಮಾರಿ, ತಿಮ್ಮಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.